ಗದಗ:ಮದ್ವೆಯಾಗಲು ಕನ್ಯೆ ನೋಡಿಕೊಂಡು ವಾಪಸ್​ ಬರುತ್ತಿದ್ದ ಯುವಕನೊಬ್ಬ ಮಾರ್ಗಮಧ್ಯೆ ಹಳ್ಳದ ನೀರಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಯಕ್ಲಾಸಪುರ ಗ್ರಾಮದಲ್ಲಿ ನಡೆದಿದೆ.
ಟಿಪ್ಪು ಸುಲ್ತಾನ್ (26) ಮೃತ ದುರ್ದೈವಿ. ಗುರುವಾರ ಕನ್ಯೆ ನೋಡಲು ಉಪ್ಪಿನ ಬೆಟಗೇರಿಗೆ ಹೋಗಿದ್ದ ಯುವಕ ಸಂಜೆ ವಾಪಸ್​ ಊರಿಗೆ ಹಿಂತಿರುಗುತ್ತಿದ್ದ. ಈ ವೇಳೆ ಹಳ್ಳದ ನೀರಲ್ಲಿ ಕೊಚ್ಚಿಹೋಗಿದ್ದ. ಹಳ್ಳದ ದಂಡೆಯಲ್ಲಿರುವ ಮುಳ್ಳಿನ ಕಂಟಿಯಲ್ಲಿ ಸಿಲುಕಿದ್ದ ಟಿಪ್ಪು ಸುಲ್ತಾನ್ ಮೃತದೇಹವನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೊರ ತೆಗೆದಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಸಾವು-ನೋವು ಸಂಭವಿಸುತ್ತಿದ್ದು, ಜನರ ಬದುಕು ಅಕ್ಷರಶಃ ಮೂರಾಬಟ್ಟೆಯಾಗಿದೆ. ಕೆರೆ-ಕಟ್ಟೆ-ಹಳ್ಳಗಳು ಉಕ್ಕಿ ಹರಿಯುತ್ತಿದ್ದು, ಕೆಲವೆಡೆ ರಸ್ತೆಗಳು ಕುಸಿದು ಜಲಾವೃತಗೊಂಡಿದೆ.
ದೊಡ್ಡ ತ್ಯಾಗಕ್ಕೆ ಸಿದ್ಧರಾದರೇ ಡಿಕೆಶಿ? ಕುತೂಹಲ ಮೂಡಿಸಿದೆ ಅವರ ಈ ಮಾತು…

‘ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ, ಕಾರಂಜಿ ಕಲ್ಲು! ಡಮರುಗ, ಕಮಲ, ಆನೆ, ಕುದುರೆ… ಹಿಂದೂ ಚಿಹ್ನೆಯಲ್ಲ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + eight =
Remember me
