ಬೆಂಗಳೂರು:ರಾಜ್ಯದ ಹಲವೆಡೆ ಬುಧವಾರ ಸುರಿದ ಮಳೆಗೆ ಮೂವರು ಬಲಿಯಾಗಿದ್ದಾರೆ. ಬಿರುಗಾಳಿ ಸಹಿತ ಮಳೆಗೆ ಹಲವೆಡೆ ಮರಗಳು, ವಿದ್ಯುತ್​ ಕಂಬಗಳು ಧರೆಗುರುಳಿವೆ. ಕೆಲವೆಡೆ ಆಲಿಕಲ್ಲು ಮಳೆಯಾಗಿದ್ದು, ಬೆಳೆ ಹಾನಿಯಾಗಿದೆ.
ಚಿತ್ರದುರ್ಗದಲ್ಲಿ ಸಿಡಿಲಿಗೆ ಅಮ್ಮ-ಮಗ ಬಲಿ:ಚಿತ್ರದುರ್ಗ ತಾಲ್ಲೂಕಿನ ಮೇಗಳಹಟ್ಟಿ ಗ್ರಾಮದಲ್ಲಿ ಕುರಿ ಮೇಯಿಸಲು ಹೋಗಿದ್ದ ತಾಯಿ-ಮಗ ಇಬ್ಬರೂ ಸಿಡಿಲಿಗೆ ಬಲಿಯಾಗಿದ್ದಾರೆ. ಮಾರಕ್ಕ(40) ಮತ್ತು ವೆಂಕಟೇಶ್(17) ಮೃತರು. ಎಂದಿನಂತೆ ಕುರಿಗಳನ್ನು ಮೇಯಿಸಿಕೊಂಡು ಬರಲು ಬುಧವಾರ ತೆರಳಿದ್ದರು. ಮಳೆ ಜೋರಾಗಿ ಬರುತ್ತಿದ್ದರಿಂದ ಜಮೀನುವೊಂದರಲ್ಲಿ ಹುಣಿಸೆ ಮರದ ಕೆಳಗೆ ನಿಂತಿದ್ದ ತಾಯಿ-ಮಗನಿಗೆ ಸಿಡಿಲು ಬಡಿದಿದೆ. ಕತ್ತಲಾದರೂ ಕುರಿ ಹಾಗೂ ಇವರಿಬ್ಬರು ಮನೆಗೆ ಬಾರದ್ದನ್ನು ಕಂಡು ಹುಡುಕಲು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಗುಟ್ಟಹಳ್ಳಿ‌ ಗ್ರಾಮದ ರೈತ ಕೃಷ್ಣಪ್ಪಗೆ ಸೇರಿದ ಹಸು ಸಿಡಿಲಿಗೆ ಬಲಿಯಾಗಿದೆ. ಚಿಕ್ಕಬಳ್ಳಾಪುರ ಗ್ರಾಮದ ರೈತ ನಾರಾಯಣಪ್ಪಗೆ ಸೇರಿದ 1 ಎಕರೆ ಭತ್ತ ಸಿಡಿಲಿಗೆ ಆಹುತಿಯಾಗಿದೆ.
ಹುಬ್ಬಳ್ಳಿಯಲ್ಲಿ ಮರ ಬಿದ್ದು ವ್ಯಕ್ತಿ ಸಾವು:ಹುಬ್ಬಳ್ಳಿಯ ದೇಸಾಯಿ ಕ್ರಾಸ್​ನ ಪಿಂಟೋ ರಸ್ತೆಯಯಲ್ಲಿ ಪ್ರಯಾಣಿಕರನ್ನ ಕರೆದೊಯ್ಯುತ್ತಿದ್ದ ಆಟೋ ಮೇಲೆ ಮರ ಬಿದ್ದು ಓರ್ವ ಮೃತಪಟ್ಟಿದ್ದಾನೆ. ರುಬ್ಬಿನ್ ಮೋರಿಸ್ ಪೆರೇರಾ (42) ಮೃತ ದುರ್ದೈವಿ. ಪೇಂಟಿಂಗ್ ಕೆಲಸ ಮುಗಿಸಿ ಮನೆಗೆ ಹೋಗುವಾಗ ಘಟನೆ ಸಂಭವಿಸಿದೆ.
ಮರಗಳು-ವಿದ್ಯುತ್​ ಕಂಬಗಳು ಧರೆಗೆ:ಜೋರಾದ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಿದ್ದರಿಂದ ಹುಬ್ಬಳ್ಳಿ ನಗರದ ವಿವಿಧೆಡೆ 40ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. 30ಕ್ಕೂ ಹೆಚ್ಚು ವಾಹನ ಜಖಂಗೊಂಡಿವೆ. ತತ್ವದರ್ಶ ಆಸ್ಪತ್ರೆ ರಸ್ತೆಯಲ್ಲಿ ಕಾರ್​ ಮೇಲೆ ಮರ ಬಿದ್ದು ನಜ್ಜುಗುಜ್ಜಾಗಿದ್ದು, ಪ್ರಯಾಣಿಕರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆನಂದ ನಗರದಲ್ಲಿ ಎರಡು ಮನೆ, ಬಾಣತಿಕಟ್ಟೆಯಲ್ಲಿ ಒಂದು ಮನೆಗೆ ಭಾಗಶಃ ಹಾನಿಯಾಗಿವೆ.
ಹಾಸನ ನಗರ ಸೇರಿ ಜಿಲ್ಲೆಯ ಹಲವೆಡೆ ಬುಧವಾರ ಮಳೆಯಾಗಿದೆ. ಹಳೇಬೀಡು ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು ಚನ್ನರಾಯಪಟ್ಟಣ, ಬೇಲೂರು, ಅರಕಲಗೂಡು ಸುತ್ತಮುತ್ತ ಗಾಳಿ ಸಹಿತ ಜೋರಾಗಿ ಮಳೆ ಸುರಿದಿದೆ. ಹೊಳೆನರಸೀಪುರದಲ್ಲಿ ಕೆಲ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ತೊಂದರೆ ಅನುಭವಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಿದ್ದು, ಮರ ಬಿದ್ದು ವಿದ್ಯುತ್​ ಕಂಬಗಳು ಧರಾಶಾಯಿಯಾಗಿವೆ. ಹಲವು ಮನೆಗಳಿಗೂ ಹಾನಿಯಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಸೇರಿ ವಿವಿಧೆಡೆ ಬುಧವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಸಹಿತ ಜೋರು ಮಳೆಯಾಗಿದೆ. ಚಾಮರಾಜನಗರ, ಮೈಸೂರು ಜಿಲ್ಲೆಯಲ್ಲಿ ಮಿಂಚು, ಗುಡುಗು ಸಹಿತ ಸಾಧಾರಣದಿಂದ ಜೋರು ಮಳೆಯಾಗಿದೆ.
ರಾಮನಗರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ 2ಗಂಟೆ ಕಾಲ ಎಡಬಿಡದೆ ಸುರಿದ ಬಿರುಗಾಳಿ ಮಳೆಗೆ ನೂರಾರು ವಿದ್ಯುತ್​ ಕಂಬಗಳು ಮುರಿದು ಬಿದ್ದಿವೆ. 40 ವಿದ್ಯುತ್​ ಪರಿವರ್ತಕಗಳು ಸಿಡಿಲಿಗೆ ಸುಟ್ಟು ಹೋಗಿವೆ. ಮಾವು, ಬಾಳೆ ಬೆಳೆ ಶೇ.80 ನಷ್ಟವಾಗಿದೆ. ಪಾಲಿಹೌಸ್​, ಮನೆಗಳೂ ಕುಸಿದಿವೆ. ಚಿಕ್ಕಬಳ್ಳಾಪುರದಲ್ಲೂ ಬುಧವಾರ ಸಂಜೆ ಸುರಿದ ಆಲಿಕಲ್ಲು ಮಳೆಯಿಂದ ದ್ರಾಕ್ಷಿ, ಮಾವು ಬೆಳೆಗಳು ನಷ್ಟವಾಗಿವೆ. ಚಿಕ್ಕಬಳ್ಳಾಪುರದಲ್ಲೂ ಬಿರುಗಾಳಿ ಸಹಿತ ಮಳೆಯಾಗಿದ್ದು, ನಂದಿಬೆಟ್ಟದ ಪ್ರವೇಶ ದ್ವಾರದ ಬಳಿಯೇ 2 ಮರಗಳು ಧರೆಗುರುಳಿವೆ.
ಯೂಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಸಿದ್ದಲಿಂಗ ಶ್ರೀಗಳು ನೆರವು: ಸಿದ್ಧಗಂಗಾ ಮೆಡಿಕಲ್​ ಕಾಲೇಜಿನಲ್ಲಿ ಉಚಿತ ಶಿಕ್ಷಣ

ಪತ್ನಿಯ ಕೊಲೆ ಕೇಸ್​ನಲ್ಲಿ ಗಂಡನಿಗೆ ಜೈಲುಶಿಕ್ಷೆ, ಅತ್ತ ಪ್ರಿಯಕರನೊಂದಿಗೆ ಪ್ರತ್ಯಕ್ಷವಾದ ಪತ್ನಿ! ದುಡುಕಿಬಿಟ್ಟ ಮಾವ…

ಮದ್ವೆಯಾದ 11ನೇ ದಿನಕ್ಕೆ ವರ ಸಾವು, ವಧುವಿನ ಸ್ಥಿತಿ ಚಿಂತಾಜನಕ! ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
