ರಾಮನಗರ:ಮಳೆ ನೀರು ನಗರದ ಖಾಸಗಿ ಆಸ್ಪತ್ರೆಗೆ ನುಗ್ಗಿದ್ದು, ನೆಲಮಹಡಿ ಸಂಪೂರ್ಣ ಜಲಾವೃತಗೊಂಡಿದೆ. ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಸ್ಥಳಾಂತರ ಮಾಡಲಾಗಿದ್ದು, ವೈದ್ಯಕೀಯ ಉಪಕರಣಗಳು ಹಾನಿಯಾಗಿವೆ.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ರಾಮಕೃಷ್ಣ ಆಸ್ಪತ್ರೆಯ ಹೊರರೋಗಿಗಳ ವಿಭಾಗ ಸಂಪೂರ್ಣ ಮುಳುಗಡೆಯಾಗಿದ್ದು, ಆತಂಕದ ಸ್ಥಿತಿ ನಿರ್ಮಾಣವಾಗಿದೆ. ವೈದ್ಯಕೀಯ ಸಲಕರಣೆಗಳನ್ನ ನೀರಿನಿಂದ ಹೊರತೆಗೆಯಲು ಆಸ್ಪತ್ರೆ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ರಾಮನಗರದಲ್ಲಿ ಸೋಮವಾರ ಮುಂಜಾನೆಯಿಂದ ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಜನರ ಬದುಕು ಮೂರಾಬಟ್ಟೆಯಾಗಿದೆ. ಬಿಡದಿಯ ತೊರೆದೊಡ್ಡಿಯಲ್ಲಿ ಬೃಹತ್‌ ಆಲದ ಮರವೊಂದು ಕಾರಿನ ಮೇಲೆ ಬಿದ್ದು, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಅರ್ಕಾವತಿ ನದಿ ನೀರಲ್ಲಿ ಹಸುವೊಂದು ಕೊಚ್ಚಿಕೊಂಡು ಹೋಗಿದೆ.

ಮೈಸೂರು-ಬೆಂಗಳೂರು ಹೆದ್ದಾರಿ ಕರೆಯಂತಾಗಿದ್ದು, ವಾಹನ ಸಂಚಾರ ಬಂದ್​ ಆಗಿದೆ. ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ. ತಗ್ಗುಪ್ರದೇಶ, ಕೃಷಿ ಜಮೀನುಗಳಲ್ಲಾ ಜಲಾವೃತವಾಗಿದ್ದು, ಕೆಲವಡೆ ನೀರು ಧುಮ್ಮಿಕ್ಕಿ ಹರಿಯುತ್ತಿದೆ. ಹೊಳೆಯಂತಾದ ಹೆದ್ದಾರಿಯಲ್ಲೇ ವಾಹನಗಳು ನಿಂತಿವೆ.
ಮದ್ವೆ ನಡೆಯುತ್ತಿರುವಾಗಲೇ ಕಲ್ಯಾಣ ಮಂಟಪಕ್ಕೆ ನುಗ್ಗಿದ ಮಳೆ ನೀರು! ಚಾಮರಾಜನಗರದಲ್ಲಿ ಕೆಲ ಗ್ರಾಮಗಳು ಜಲಾವೃತ

ಕಾರಿನ ಮೇಲೆ ಆಲದ ಮರ ಬಿದ್ದು ಓರ್ವ ಸಾವು: ಅರ್ಕಾವತಿ ನದಿ ನೀರಲ್ಲಿ ಕೊಚ್ಚಿಹೋದ ಹಸು

ಬೆಂಗಳೂರಿನಿಂದ ಮೇಲುಕೋಟೆಗೆ ಉಚಿತ ಬಸ್​! ಪ್ರತಿದಿನ 2 ಬಸ್ ಸಂಚಾರ, ಹೀಗಿದೆ ಸಮಯ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:12 + twenty =
Remember me
