ರಾಮನಗರ:ಜಿಲ್ಲೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಜಿಲ್ಲೆಯಾಧ್ಯಂತ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.
ಮುಂಜಾನೆ 4 ಗಂಟೆ ಸುಮಾರಿಗೆ ಬಿರುಸಿನಿಂದಲೇ ಆರಂಭಗೊಂಡ ಮಳೆ 8 ಗಂಟೆ ಕಳೆದರೂ ಬಿಡುವು ನೀಡದೆ ಧಾರಾಕಾರವಾಗಿ ಸುರಿದಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್​ ಆಗಿದೆ. ನೀರಿನಲ್ಲಿ ವಾಹನ ಚಲಾಯಿಸಲು ಮುಂದಾದ ಪರಿಣಾಮ ಕಾರೊಂದು ನೀರಿನಲ್ಲಿ ಮುಳಿಗಿದೆ. ಬಿಳಗುಂಬ ಕ್ರಾಸ್​ ಬಳಿ ಮಳೆ ನೀರಲ್ಲಿ ಖಾಸಗಿ ಬಸ್​ ಅರ್ಧದಷ್ಟು ಮುಳುಗಿದೆ. ಇನ್ನು ರೈಲೆ ಹಳಿಗಳೂ ಜಾಲವೃತಗೊಂಡಿದ್ದು, ನೀರ ಮೇಲೆ ರೈಲು ಸಂಚರಿಸುತ್ತಿರುವಂತೆ ಗೋಚರಿಸುತ್ತಿದೆ.

ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲೂ ವ್ಯಾಪಕ ಮಳೆಯಾಗಿದೆ. ಎಂದಿನಂತೆ ಕೆಲಸಗಳಿಗೆ ತೆರಳಬೇಕಿದ್ದ ಜನತೆ ತೊಂದರೆ ಅನುಭವಿಸಿದ್ದಾರೆ. ಗೌರಿ-ಗಣೇಶ ಹಬ್ಬದ ಹಿನ್ನೆಲೆ ಮಾರುಕಟ್ಟೆಯಲ್ಲಿ ನಡೆಯಬೇಕಿದ್ದ ವ್ಯಾಪಾರಕ್ಕೂ ಕತ್ತರಿ ಬಿದ್ದಿದೆ. ಮಾರುಕಟ್ಟೆಗಳ ಬಳಿ ಜನತೆ ಸುಳಿಯದಂತಾಗಿದ್ದು, ವ್ಯಾಪಾರಾಸ್ಥರು ಮಳೆ ನಿಲ್ಲುವಿಕೆಗಾಗಿಯೇ ಪ್ರಾರ್ಥನೆ ಮಾಡುತ್ತಿದ್ದಾರೆ.

ಸಂಚಾರ ಬಂದ್:ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭಾರಿ ನೀರು ಸಂಗ್ರಹವಾಗಿರುವ ಕಾರಣದಿಂದಾಗಿ ಸಂಚಾರ ಬಂದ್​ ಆಗಿದೆ. ರಾಮನಗರ ಬಸವನಪುರ, ಕನಕಪುರ ಸರ್ಕಲ್​ನಲ್ಲಿ ನೀರು ರಸ್ತೆ ಮೇಲೆಯೇ ಹರಿಯುತ್ತಿರುವ ಕಾರಣ ವಾಹನಗಳು ಸಾಲುಗಟ್ಟಿ ನಿಂತಿವೆ.
ಮಂಡ್ಯ ಜಿಲ್ಲೆಯಲ್ಲಿ ಮಳೆಯ ಆರ್ಭಟ: ಎಲ್​ಕೆಜಿಯಿಂದ 10ನೇ ತರಗತಿಯವರೆಗೆ ರಜೆ ಘೋಷಣೆ

ತರಬೇತಿ ನಿರತ 500 ಐಎಎಸ್ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷರಿಂದ ಪಾಠ! ವಿಜಯನಗರ ಜಿಲ್ಲೆಯ ಮಹೇಂದ್ರಗೆ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
