ಬೆಂಗಳೂರು:ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಬುಧವಾರ ದಾಖಲೆ ಮಟ್ಟದಲ್ಲಿ ರೇಷ್ಮೆಗೂಡು ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ‌ 1043 ರೂಪಾಯಿಗೆ ಮಾರಾಟವಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಸಚಿವ ಡಾ.ನಾರಾಯಣಗೌಡ, ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆಗೂಡಿನ ದರ ನಾಲ್ಕು ಡಿಜಿಟ್‌ಗೆ ತಲುಪಿರುವುದು ಉತ್ತಮ ಬೆಳವಣಿಗೆ. ದಿನದಿಂದ ದಿನಕ್ಕೆ ರೇಷ್ಮೆಗೂಡಿನ ದರ ಏರಿಕೆಯಾಗುತ್ತಿದೆ ಎಂದಿದ್ದಾರೆ.
ರೇಷ್ಮೆಗೂಡಿನ ದರ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ರೇಷ್ಮೆ ಬೆಳೆಗಾರರ ಜತೆ ನಮ್ಮ ಸರ್ಕಾರ ಇದೆ. ರೇಷ್ಮೆ ಬೆಳೆಗಾರರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಹಾಗೂ ಗುಣಮಟಕ್ಕೆ ತಕ್ಕಂತೆ ಉತ್ತಮ ಬೆಲೆ ಸಿಗುವಂತೆ ನೋಡಿಕೊಳ್ಳುತ್ತೇನೆ. ರೇಷ್ಮೆಗೂಡು ದರ ನಾಲ್ಕು ಡಿಜಿಟ್‌ಗೆ ತಲುಪಿರುವುದು ಮತ್ತಷ್ಟು ರೈತರು ರೇಷ್ಮೆ ಬೆಳೆಯುವುದಕ್ಕೆ ಪ್ರೇರಣೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ರೇಷ್ಮೆ ಮಾರುಕಟ್ಟೆಗಳಲ್ಲಿ ಆಗುತ್ತಿದ್ದ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿರುವ ಪರಿಣಾಮದಿಂದ ರೇಷ್ಮೆ ಗೂಡಿನ ಗುಣಮಟ್ಟಕ್ಕೆ ತಕ್ಕಂತೆ ನೈಜ ಬೆಲೆ ಸಿಗುತ್ತಿದೆ. ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡ ಪರಿಣಾಮ ದಾಖಲೆ ದರಕ್ಕೆ ರೇಷ್ಮೆಗೂಡು ಮಾರಾಟ ಆಗುತ್ತಿದೆ ಎಂದಿದ್ದಾರೆ.
ರೇಷ್ಮೆ ದರ ಸರಾಸರಿ ಕಳೆದ ವರ್ಷಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ. 2020-21ನೇ ಸಾಲಿನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ ಸರಾಸರಿ 300 ರೂಪಾಯಿ ಇತ್ತು. 2021ರ ನವೆಂಬರ್- ಡಿಸೆಂಬರ್​ನಲ್ಲಿ 700-800 ರೂಪಾಯಿ ಇತ್ತು. ಈಗ ಒಂದು ಕೆಜಿ ರೇಷ್ಮೆಗೂಡು 1043 ರೂಪಾಯಿಗೆ ಮಾರಾಟವಾಗುವ ಮೂಲಕ ದಾಖಲೆ ಸೃಷ್ಟಿಸಿದೆ.
ಬೆಂಗಳೂರಲ್ಲಿ ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕ್ಯಾನಿಕ್ ಆದ ಪೊಲೀಸ್​! ತಪ್ಪಿತು ಅನಾಹುತ, ಪೇದೆ ಕಾರ್ಯಕ್ಕೆ ಶ್ಲಾಘನೆ

ಮುದ್ದಹನುಮೇಗೌಡ ಬಿಜೆಪಿ ಅಭ್ಯರ್ಥಿ? ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ

ವಿದೇಶದಲ್ಲಿರುವೆ, ಬೆಂಗಳೂರಿಗೆ ಬಂದು ಮದ್ವೆ ಆಗ್ತೀನಿ… ಎಂದು ಯುವತಿಗೆ ಆಸೆ ಹುಟ್ಟಿಸಿದವ ಮಾಡಬಾರದು ಮಾಡಿಬಿಟ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
