ಬೆಳಗಾವಿ:ಸುವರ್ಣಸೌಧ ಸಭಾಂಗಣದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ ಬುಧವಾರ ನಡೆಯಿತು. ನಗರಾಭಿವೃದ್ಧಿ ಕ್ಷೇತ್ರದ ಸಾಧಕ ರವಿಚಂದರ್ ವೆಂಕಟರಾಮನ್, ಸ್ಯಾಂಡಲ್​ವುಡ್​ ನಟ ರಮೇಶ್​ ಅರವಿಂದ್, ಸಾಮಾಜೋ ಧಾರ್ಮಿಕ ಕ್ಷೇತ್ರದ ಸಾಧಕಿ ಅಕ್ಕ ಅನ್ನಪೂರ್ಣ ತಾಯಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ‌ ಮಾಡಲಾಯಿತು.‌
ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅವರು ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದರು. ವಿವಿಧ ವಿಷಯವಾರು ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿದ ನಾಲ್ವರು ವಿದ್ಯಾರ್ಥಿನಿಯರು ಸೇರಿದಂತೆ ಸಾಧಕ ವಿದ್ಯಾರ್ಥಿಗಳಿಗೆ ಒಟ್ಟು 11 ಸುವರ್ಣ ಪದಕ ವಿತರಿಸಲಾಯಿತು.‌
ಸ್ನಾತಕ ಪದವೀಧರ ವಿದ್ಯಾರ್ಥಿನಿಯರಾದ ರಸಿಕಾ ಮಲೈ(ಇಂಗ್ಲಿಷ್), ಸಂಜಿವೀನಿ ಪಾಟೀಲ(ಕನ್ನಡ), ವರ್ಷಾ ಮರ್ಡಿ(ಸೋಶಿಯಾಲಜಿ), ಪ್ರೇರಣಾ ಪನಾಲ್ಕರ್(ಕಾಮರ್ಸ್), ಬ್ಯಾಚುಲರ್ ಆಫ್ ಕಾಮರ್ಸ್ ವಿದ್ಯಾರ್ಥಿನಿ ವಿದ್ಯಾವತಿ ಗುಡೋದಗಿ, ಬ್ಯಾಚುಲರ್ ಆಫ್ ಸೈನ್ಸ್ ವಿದ್ಯಾರ್ಥಿನಿ ದೀಪಿಕಾ ಚೌವ್ಹಾಣ, ಮಾಸ್ಟರ್ ಆಫ್ ಆರ್ಟ್ಸ್ ಇನ್ ಕನ್ನಡ ವಿದ್ಯಾರ್ಥಿನಿ ದ್ರಾಕ್ಷಾಯಿಣಿ ವಾಲ್ಮಿಕಿ, ಮಾಸ್ಟರ್ ಆಫ್ ಆರ್ಟ್ಸ್ ಇನ್ ಸೋಶಿಯಾಲಜಿ ವಿದ್ಯಾರ್ಥಿ ತಾತ್ಯಾಸಾಬ್ ಧಾಬಡೆ, ಮಾಸ್ಟರ್ ಆಫ್ ಬಿಜಿನೆಸ್ ಅಡ್ಮಿನಿಸ್ಟ್ರೇಷನ್ ವಿದ್ಯಾರ್ಥಿನಿ ಗೌರಾ ಅಣೆಪ್ಪನವರ, ಮಾಸ್ಟರ್ ಆಫ್ ಸೈನ್ಸ್ ಇನ್ ಮ್ಯಾಥೆಮ್ಯಾಟಿಕ್ಸ್ ವಿದ್ಯಾರ್ಥಿನಿ ಅನುಜಾ ಪಾಟೀಲ ಅವರಿಗೆ ಸುವರ್ಣ ಪದಕ ಒಲಿದಿದೆ.
ಕುಲಪತಿ ಪ್ರೊ.ಎಂ.ರಾಮಚಂದ್ರ ಗೌಡ, ಕೇಂದ್ರ ಬುಡಕಟ್ಟು ವಿವಿ ಕುಲಪತಿ ಪ್ರೊ.ಟಿ.ವಿ.ಕಟ್ಟಿಮನಿ, ಮೌಲ್ಯಮಾಪನ ಕುಲಸಚಿವ ಪ್ರೊ.ಶಿವಾನಂದ ಗೊರನಾಳೆ, ಪ್ರೊ.ಎಂ. ಹನುಮಂತಪ್ಪ, ಸಿಡಿಸಿ ನಿರ್ದೇಶಕ ಪ್ರೊ. ಗಂಗಾಧರಯ್ಯ, ಸಿ.ಎನ್. ವಾಗ್ಮಾರೆ ಸೇರಿ ಇತರರು ಉಪಸ್ಥಿತರಿದ್ದರು.
ಮೈಸೂರು ಅರಮನೆಯಲ್ಲಿ ಮರಿಗೆ ಜನ್ಮ ನೀಡಿದ ಲಕ್ಷ್ಮೀ ಆನೆ! ಆನೆ ಗರ್ಭಿಣಿ ಎಂಬುದು ನಮ್ಗೆ ಗೊತ್ತೇ ಇರಲಿಲ್ಲ… ಎಂದ ಅಧಿಕಾರಿಗಳು

ರೋಗಿಯ ಜೀವ ಉಳಿಸಲು ಬೆಂಗಳೂರಿನ ಟ್ರಾಫಿಕ್​ನಲ್ಲಿ 3 ಕಿ.ಮೀ. ಓಡಿದ ಡಾಕ್ಟರ್​! ವಿಡಿಯೋ ವೈರಲ್​, ಎಲ್ಲೆಡೆ ಮೆಚ್ಚುಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
