ಕೋಲಾರ:ಕೆಜಿಎಫ್​ನ ಮಂಜುನಾಥ ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಯುವಕನಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 30 ವರ್ಷ ಕಠಿಣ ಸಜೆ ಮತ್ತು 22 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
2019ರ ಅ.10ರಂದು ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಮೇಲೆ 26 ವರ್ಷದ ಯುವಕ ಕುಟ್ಟಿ ಅಲಿಯಾಸ್​ ತಮಿಳರಸನ್ ಅತ್ಯಾಚಾರವೆಸಗಿದ್ದ. ಈ ಸಂಬಂಧ ಕೆಜಿಎಫ್​ನ ರಾರ್ಬಟ್​ಸನ್​ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಠಾಣೆ ಇನ್​ಸ್ಪೆಕ್ಟರ್​ ಎಂ.ಸೂರ್ಯಪ್ರಕಾಶ್​ ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಶಿಕ್ಷೆ ವಿಧಿಸಿದೆ. ನಿನ್ನೆ(ಬುಧವಾರ) ತೀರ್ಪು ಪ್ರಕಟಿಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು ಅಪರಾಧಿಗೆ 30 ವರ್ಷ ಕಠಿಣ ಸಜೆ ಮತ್ತು 22 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರದ ವಿಶೇಷ ಅಭಿಯೋಜಕ ಎಸ್​. ಮುನಿಸ್ವಾಮಿಗೌಡ ವಾದ ಮಂಡಿಸಿದ್ದರು.
ಸರಿಯಾಗಿ ಓದಲಿಲ್ಲವೆಂದು ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು! ತುಮಕೂರಲ್ಲಿ ಘಟನೆ

ದೂರು ನೀಡಲು ಬಂದಾಕೆಯನ್ನೇ ಮಂಚಕ್ಕೆ ಕರೆದ ಪೊಲೀಸ್​ ಇನ್​ಸ್ಪೆಕ್ಟರ್​! ಸಂತ್ರಸ್ತೆ ಬಿಚ್ಚಿಟ್ಟ ನೋವು ಇಲ್ಲಿದೆ

ಅಯ್ಯೋ ವಿಧಿಯೇ ನೀನೆಷ್ಟು ಕ್ರೂರಿ? ನನ್ನ ಹೊಟ್ಟೆಯಲ್ಲಿದ್ದ 7 ತಿಂಗಳ ಮಗುವನ್ನೂ ಕಿತ್ತುಕೊಂಡೆ.. ಈಗ ಗಂಡನ ಪ್ರಾಣವನ್ನೂ ತೆಗೆದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
