ಬೆಂಗಳೂರು:ರಾಜ್ಯದಲ್ಲೆಡೆ ವರುಣಾರ್ಭಟ ಮುಂದುವರಿದಿರುವ ಬೆನ್ನಲ್ಲೇ ಎರಡು ತಿಂಗಳಲ್ಲಿ ಮಲೆನಾಡು, ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕಗಿಂತ ಕರಾವಳಿ ಜಿಲ್ಲೆಗಳಲ್ಲಿ ದಾಖಲೆ ಮಟ್ಟದಲ್ಲಿ ಮಳೆಯಾಗಿದೆ.
ಜೂ 1ರಿಂದ ಆ.2ರವರೆಗೆ ಕರಾವಳಿ ವ್ಯಾಪ್ತಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವಾಡಿಕೆಯಂತೆ 2,046 ಮಿಮೀ ಮಳೆಯಾಗಬೇಕಿತ್ತು. ಆದರೆ, 2,713 ಮಿಮೀ ಸುರಿದಿದ್ದು, ವಾಡಿಕೆಗಿಂತ ಶೇ.33ರಷ್ಟು ಅಧಿಕ ವರ್ಷಧಾರೆಯಾಗಿದೆ. ಮಲೆನಾಡು ವ್ಯಾಪ್ತಿಯ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲಿ 993 ಮಿಮೀ ಮಳೆ ಬದಲಾಗಿ 1,295 ಮಿಮೀ ಬಿದ್ದಿದ್ದು, ವಾಡಿಕೆಗಿಂತ ಶೇ.30ರಷ್ಟು ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 151 ಮಿಮೀ ಮಳೆ ಬೀಳುವ ಬದಲು 215 ಮಿಮೀ ಸುರಿದಿದ್ದು, ಶೇ.43ರಷ್ಟು ಹೆಚ್ಚಿನ ಪ್ರಮಾಣದಲ್ಲಿ ವರ್ಷಧಾರೆಯಾಗಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವಾಡಿಕೆಯಂತೆ 228 ಮಿಮೀ ಮಳೆಯಾಗಬೇಕಿತ್ತು. ಆದರೆ, 293 ಮಿಮೀ ಸುರಿದಿದ್ದು, ವಾಡಿಕೆಗಿಂತ ಶೇ.28 ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. 4 ವರ್ಷದ ಬಳಿಕ ಅತಿ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ.
ಜೂ 1ರಿಂದ ಆ.2ರವರೆಗೆ ರಾಜ್ಯದ ಯಾವುದೇ ಜಿಲ್ಲೆಗಳು ಮಳೆ ಕೊರತೆ ಅನುಭವಿಸಿಲ್ಲ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ,ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬಳ್ಳಾರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 22 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ವರ್ಷಧಾರೆಯಾಗಿದೆ. 9 ಜಿಲ್ಲೆಗಳಲ್ಲಿ ವಾಡಿಕೆಯಷ್ಟೇ ಸುರಿದಿದೆ.
ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಒಡೆತನದ ಬೇಕರಿ ನೆಲಸಮ; ಸಿಎಂ ಯೋಗಿ ಸರ್ಕಾರದಿಂದ ಬುಲ್ಡೋಜರ್​ ಕ್ರಮ
ಈ ಬಾರಿ ಮಳೆ ದಿನ ಅವಧಿ ಬದಲಾಗಿಲ್ಲಐದು ವರ್ಷಗಳಿಂದ ಮಳೆ ಅವಧಿ ದಿನಗಳು ಬದಲಾಗುತ್ತಿತ್ತು. ಜೂನ್​ನಲ್ಲಿ ಬೀಳುವ ಮಳೆ ಜುಲೈನಲ್ಲಿ, ಜುಲೈನಲ್ಲಿ ಬೀಳುವ ಮಳೆ ಆಗಸ್ಟ್​ನಲ್ಲಿ, ಆಗಸ್ಟ್​ನಲ್ಲಿ ಬೀಳುವ ಮಳೆ ಸೆಪ್ಟೆಂಬರ್​ನಲ್ಲಿ ಸುರಿಯುತ್ತಿತ್ತು. ಸತತ 5 ವರ್ಷಗಳಿಂದ ಜೂನ್​,ಜುಲೈನಲ್ಲಿ ಮಳೆ ಕುಂಠಿತವಾಗುತ್ತಿತ್ತು. ಆರಂಭದಲ್ಲೇ ಮುಂಗಾರು ಕೈಕೊಟ್ಟ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿ ಆಹಾರ ಉತ್ಪಾದನೆ ಕುಸಿತವಾಗುತ್ತಿತ್ತು. ಆದರೆ, ಈ ಬಾರಿ ಮಳೆ ದಿನಗಳ ಅವಧಿ ಬದಲಾಗಿಲ್ಲ. ಜೂನ್​,ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿರುವುದು ಗಮನಾರ್ಹ.
ತಿಂಗಳವಾರು ಮಳೆ ವಿವರ:ಪ್ರದೇಶ            ಜೂನ್​                      ಜುಲೈ(ಮಿಮೀಗಳಲ್ಲಿ)ಕರಾವಳಿ            699                            1,817ಮಲೆನಾಡು         258                             985ಉತ್ತರ ಕರ್ನಾಟಕ  145                            142ದಕ್ಷಿಣ  ಕರ್ನಾಟಕ  113                              100
ಅರಬ್ಬಿ ಸಮುದ್ರ ಪೂರ್ವ ಭಾಗದಲ್ಲಿ ತೇವಾಂಶ ಭರಿತ ಮೋಡಗಳು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ,ಮೇಲ್ಮೆ ಸುಳಿಗಾಳಿ ದೀರ್ವಾಗಿ ಇದ್ದಿರುವ ಕಾರಣದಿಂದಾಗಿ ಜೂನ್​ ಮತ್ತು ಜುಲೈನಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಯಿತು. ಪ್ರಸ್ತುತ ಹವಮಾನ ಸ್ಥಿತಿ ಗಮನಿಸಿದರೆ ಈ ತಿಂಗಳಲ್ಲೂ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ.| ಸಿ.ಎಸ್​.ಪಾಟೀಲ್​. ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eleven =
Remember me
