ಬೆಂಗಳೂರು:ಸರ್ಕಾರ ಕರೊನಾ ವಾರಿಯರ್ಸ್ ಎಂದು ಪರಿಗಣಿಸಿರುವ ಮತ್ತು ಕರ್ತವ್ಯದ ವೇಳೆ ಮರಣ ಹೊಂದಿರುವ ಆಶಾ, ಅಂಗನವಾಡಿ ಕಾರ್ಯಕರ್ತರ ಕುಟುಂಬಸ್ಥರಿಗೆ ಕೂಡಲೇ ಪರಿಹಾರ ವಿತರಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಕರೊನಾ ವಾರಿಯರ್ಸ್‍ಗೆ ಬಾಕಿ ಉಳಿಸಿಕೊಂಡಿರುವ ವೇತನವನ್ನೂ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಪತ್ರದ ವಿವರ ಹೀಗಿದೆ:ಕರೊನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿಗಳ ತಳಮಟ್ಟದ ಸಿಬ್ಬಂದಿ, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆಯನ್ನು ನೀಡಬೇಕಾದುದು ಸರ್ಕಾರದ ಪ್ರಧಾನ ಜವಾಬ್ದಾರಿ. ಆದರೆ ಸರ್ಕಾರ ಇನ್ನೂ ಹಲವು ಇಲಾಖೆಗಳ ಸಿಬ್ಬಂದಿಯನ್ನು ಕರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿಲ್ಲ. ಈಗಾಗಲೇ ಕರೊನಾ ವಾರಿಯರ್ಸ್ ಎಂದು ಘೋಷಿಸಿರುವವರಿಗೆ ಕಳೆದ ಎರಡ್ಮೂರು ತಿಂಗಳಿಂದ ಸಂಬಳವನ್ನೂ ನೀಡಿಲ್ಲ.
ಜತೆಗೆ ಜನರ, ರೋಗಿಗಳ ಸಂಪರ್ಕದಲ್ಲಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ, ಸರ್ಕಾರದ ತಳಮಟ್ಟದ ಸಿಬ್ಬಂದಿಗಳಿಗೆ ಕರೊನಾದಿಂದ ರಕ್ಷಣೆ ಪಡೆಯಲು ನೀಡಬೇಕಾದ ಮಾಸ್ಕ್​, ಸ್ಯಾನಿಟೈಸರ್, ಕೈಗವಸು ಮುಂತಾದ ಮೂಲಭೂತವಾದ ಸಾಮಗ್ರಿಯನ್ನೂ ನೀಡಿಲ್ಲ. ಕರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಲಾದವರಲ್ಲಿ ಕೆಲವರು ಮರಣ ಹೊಂದಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಲ್ಲಿ ಸುಮಾರು ಜನ ಕರೊನಾಕ್ಕೆ ತುತ್ತಾಗಿ ಮರಣ ಹೊಂದಿದ್ದಾರೆ. ಆದರೆ ಅವರಲ್ಲಿ ಪರಿಹಾರ ಸಿಕ್ಕಿರುವುದು ಕೇವಲ ಮೂರು ಜನರ ಕುಟುಂಬಗಳಿಗೆ ಮಾತ್ರ. ಎಲ್ಲ ಇಲಾಖೆಗಳಲ್ಲೂ ಇದೇ ರೀತಿಯ ಪರಿಸ್ಥಿತಿ ಇದೆ.
ಜೀವವನ್ನು ಪಣಕ್ಕೊಡ್ಡಿ ಕೆಲಸ ಮಾಡುತ್ತಿರುವ ಇವರೆಲ್ಲರನ್ನೂ ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಅತ್ಯಂತ ಅಮಾನವೀಯವಾಗಿದೆ. ದೇಶದ ರಾಜ್ಯಗಳಲ್ಲೇ ಆರ್ಥಿಕ ಸ್ಥಿತಿಯಲ್ಲಿ ಮೊದಲೆರಡು ಸ್ಥಾನಗಳಲ್ಲೇ ಇರುವ ಕರ್ನಾಟಕದಲ್ಲಿ ಕನಿಷ್ಠ ಮಾಸ್ಕ್​, ಸ್ಯಾನಿಟೈಸರ್ ನೀಡುವಷ್ಟು ಹೃದಯವಂತಿಕೆ, ಕರ್ತವ್ಯ ಪ್ರಜ್ಞೆ, ಉದಾರತೆಗಳನ್ನು ಆಡಳಿತ ನಡೆಸುವ ಸರ್ಕಾರ ಕಳೆದುಕೊಂಡಿರುವುದು ಅತ್ಯಂತ ಬೇಜವಾಬ್ದಾರಿಯುತವಾದ ಹಾಗೂ ಅವಮಾನಕರವಾದ ಸಂಗತಿ. ಆದ್ದರಿಂದ ಕೂಡಲೇ ಅವರ ಬೇಡಿಕೆ ಪರಿಗಣಿಸಿ ಈಡೇರಿಸಬೇಕು.
ಮಾರಣಾಂತಿಕವಾದ ಸೋಂಕನ್ನು ನಿಭಾಯಿಸುವಲ್ಲಿ ಮಾನವ ಸಂಪನ್ಮೂಲದ ಪಾತ್ರ ಬಹಳ ದೊಡ್ಡದು. ಅವರುಗಳನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಬೇಕಾದುದು ಸರ್ಕಾರದ ಜವಾಬ್ದಾರಿ ಎಂದು ಭಾವಿಸಿ ಕೂಡಲೇ ಈಡೇರಿಸಬೇಕೆಂದು ಪತ್ರದ ಮೂಲಕ ಮುಖ್ಯಮಂತ್ರಿಯನ್ನ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬೆಂಗಳೂರಲ್ಲಿ ಗ್ಯಾಂಗ್​ ರೇಪ್​, ಗುಪ್ತಾಂಗಕ್ಕೆ ಬಿಯರ್​ ಬಾಟಲಿ ಇಟ್ಟು ವಿಕೃತಿ ಮೆರೆದಿದ್ದ ಕಾಮುಕರಿಗೆ ಪೊಲೀಸರಿಂದ ಗುಂಡೇಟು!

ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ

ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 4 =
Remember me
