ಮಂಗಳೂರು:ನಗರದ ಪದುವ ಶಾಲೆ ವಿದ್ಯಾರ್ಥಿನಿ, ಭರತನಾಟ್ಯ ಕಲಾವಿದೆ ರೆಮೋನಾ ಪಿರೇರಾ ಅವರಿಗೆ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ‘ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ’ ಪ್ರದಾನ ಮಾಡಿದರು.
ಮಂಗಳೂರಿನ ಜಿಪಂ ಸಭಾಂಗಣದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ತಾಯಿ ಹಾಗೂ ಸೋದರನೊಂದಿಗೆ ಪಾಲ್ಗೊಂಡಿದ್ದ ರೆಮೋನಾ, ಪ್ರಧಾನಿ ಜತೆ ಮಾತುಕತೆ ನಡೆಸಿದರು. 3 ವರ್ಷ ವಯಸ್ಸಿನಿಂದಲೇ ನೃತ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದೀರಿ, ಹೇಗೆ ಅಭ್ಯಾಸ ಮಾಡಿದ್ದೀರಿ? ನೀವೇ ಸ್ವಯಂ ಆಗಿ ಅಭ್ಯಾಸ ಮಾಡುತ್ತಿದ್ದೀರಾ ಅಥವಾ ಹೆತ್ತವರು ಕಾಳಜಿ ವಹಿಸಿದ್ದರೇ ಎಂದು ಪ್ರಧಾನಿ ಪ್ರಶ್ನಿಸಿದಾಗ ‘ನನ್ನ ತಾಯಿ ಅವರಿಗೆ ಭಾರತೀಯ ಸಂಸ್ಕೃತಿ ಬಗ್ಗೆ ತುಂಬಾ ಆಸಕ್ತಿ. ಹಾಗಾಗಿ ಇದರಲ್ಲಿ ನಾನೂ ಆಸಕ್ತಿ ಬೆಳೆಸಿಕೊಂಡೆ’ ಎಂದು ರೆಮೋನಾ ಉತ್ತರಿಸಿದರು.

ಚಿಕ್ಕಂದಿನಿಂದಲೇ ಏನಾದರೂ ಕಠಿಣ ಪರಿಸ್ಥಿತಿ ಎದುರಾಗಿತ್ತೇ ಎಂದು ಪ್ರಧಾನಿ ಅವರು ಕೇಳಿದಾಗ ಉತ್ತರಿಸಿದ ರೆಮೋನಾ, ಚಿಕ್ಕಂದಿನಲ್ಲೇ ತಂದೆಯನ್ನು ಕಳೆದುಕೊಂಡೆ. ಹಾಗಾಗಿ ತಾಯಿ ಬಹಳ ಕಷ್ಟಪಟ್ಟರು, ಕಷ್ಟದಲ್ಲೇ ನನ್ನನ್ನು ಓದಿಸುತ್ತಿದ್ದಾರೆ. ನೃತ್ಯ ತರಬೇತಿಗೂ ಸೇರಿಸಿದರು… ಎನ್ನುತ್ತಿದ್ದಂತೆ ರೆಮೋನಾ ತಾಯಿಗೂ ಮೋದಿ ನಮಸ್ಕರಿಸಿದರು.

2022ನೇ ಸಾಲಿನ ರಾಷ್ಟ್ರೀಯ ಬಾಲ ಪುರಸ್ಕಾರ(ಕಲೆ ಮತ್ತು ಸಂಸ್ಕೃತಿ ವಿಭಾಗ)ಕ್ಕೆ ರಾಜ್ಯದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ರೆಮೋನಾ ಮಂಗಳೂರಿನ ಪದುವ ಪಿಯು ಕಾಲೇಜಿನ ವಿದ್ಯಾರ್ಥಿನಿ. 16 ರಾಜ್ಯಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ 20 ಪ್ರಶಸ್ತಿ ಪಡೆದುಕೊಂಡಿದ್ದಾರೆ. ಮಂಗಳೂರಿನ ನೃತ್ಯಗುರು ಡಾ.ಶ್ರೀವಿದ್ಯಾ ಮುರಳೀಧರ್‌ ಅವರ ಶಿಷ್ಯೆ. ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯು 1 ಲಕ್ಷ ರೂ. ಬಹುಮಾನ ಒಳಗೊಂಡಿದೆ.
ಮೈಸೂರಿನ ಚಹಾ ಮಾರುವವರ ಮಗಳ ಹೆಗಲಿಗೆ ದೆಹಲಿ ಗಣರಾಜ್ಯೋತ್ಸವ ಪರೇಡ್​ನಲ್ಲಿ ಎನ್​ಸಿಸಿ ನೇತೃತ್ವ!

ಸೊಸೆಯ ಸುತ್ತಿಗೆ ಏಟಿಗೆ ಅತ್ತೆ ಸಾವು! ಚಿತ್ರದುರ್ಗ ಜಿಲ್ಲೇಲಿ ರಾತ್ರೋರಾತ್ರಿ ಅಮಾನುಷ ಕೃತ್ಯ, ಬೆಚ್ಚಿಬಿದ್ದ ಸ್ಥಳೀಯರು

ಸಿದ್ಧಗಂಗಾ ಮಠದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: ಭಯದ ವಾತಾವರಣ ಸೃಷ್ಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − nine =
Remember me
