ಬೆಂಗಳೂರು:ಬಾಡಿಗೆಗೆ ನೀಡಿದ್ದ ಮನೆಯಲ್ಲಿ ಮಾಲೀಕರಿಗೂ ಗೊತ್ತಾಗದಂತೆ ಕದ್ದುಮುಚ್ಚಿ ವೇಶ್ಯಾವಾಟಿಕೆ ನಡೆಸಿದ್ದ ಪ್ರಕರಣ ಸಂಬಂಧ ಸಂಕಷ್ಟಕ್ಕೆ ಸಿಲುಕಿದ್ದ ಮನೆ ಮಾಲೀಕರಿಗೆ ಹೈಕೋರ್ಟ್​ ಬಿಗ್​ ರಿಲೀಫ್​ ನೀಡಿದೆ.
ಮನೆಯಲ್ಲಿ ಬಾಡಿಗೆದಾರ ವೇಶ್ಯಾವಾಟಿಕೆ ನಡೆಸುತ್ತಿರುವುದು ತನ್ನ ಅರಿವಿಗೆ ಬಂದಿರಲಿಲ್ಲ. ದಯವಿಟ್ಟು ನನ್ನನ್ನು ಈ ಕೇಸ್​ನಿಂದ ಮುಕ್ತಿ ಮಾಡಿ ಎಂದು ಮನೆ ಮಾಲೀಕ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್​, ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಲೀಕನಿಗೆ ಅರಿವಿಲ್ಲದಿದ್ದಾಗ ಆತನ ವಿರುದ್ಧ ಮಾನವ ಕಳ್ಳಸಾಗಣೆ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಸ್ಪಷ್ಪಪಡಿಸಿದೆ. ಈ ಆದೇಶದಲ್ಲಿ ನ್ಯಾಯಾಲಯ ವ್ಯಕ್ತಪಡಿಸಿರುವ ಅಭಿಪ್ರಾಯ ಕೇವಲ ಅರ್ಜಿದಾರರಿಗೆ ಮಾತ್ರ ಅನ್ವಯಿಸಲಿದ್ದು, ಪ್ರಕರಣದ ಇತರ ಆರೋಪಿಗಳ ವಿರುದ್ಧದ ವಿಚಾರಣೆಗೆ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ವೇಶ್ಯಾವಾಟಿಕೆ ಪ್ರಕರಣ ಸಂಬಂಧ ಚಂದ್ರ ಲೇಔಟ್​ ಪೊಲೀಸರು ದಾಖಲಿಸಿರುವ ಪ್ರಕರಣ ಮತ್ತದರ ಸಂಬಂಧ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ಬಾಕಿ ಇರುವ ವಿಚಾರಣೆ ರದ್ದು ಕೋರಿ ನಾಗರಬಾವಿ ನಿವಾಸಿ ಪ್ರಭುರಾಜ್​ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಪ್ರಕರಣವೇನು?:ನಾಗರಬಾವಿಯಲ್ಲಿರುವ ಮನೆಯನ್ನು ಅರ್ಜಿದಾರರು 2019ರ ಡಿಸೆಂಬರ್​ನಲ್ಲಿ ವ್ಯಕ್ತಿಯೊಬ್ಬರಿಗೆ ಬಾಡಿಗೆ ನೀಡಿದ್ದರು. 2020ರ ಜನವರಿಯಲ್ಲಿ ಚಂದ್ರಲೇಔಟ್​ ಠಾಣೆ ಪೊಲೀಸರು ಮನೆ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದಾಗ ಅಲ್ಲಿ ಬಾಡಿಗೆದಾರ ವೇಶ್ಯಾವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು.
ಪೊಲೀಸರು, ಬಾಡಿಗೆದಾರ ವ್ಯಕ್ತಿ ಹಾಗೂ ಮನೆ ಮಾಲೀಕರ ವಿರುದ್ಧ ಮಾನವ ಕಳ್ಳಸಾಗಣೆ (ತಡೆ) ಕಾಯ್ದೆ ಮತ್ತು ಐಪಿಸಿ ಸೆಕ್ಷನ್​ 370ರ ಅಡಿ ಎಫ್​ಐಆರ್​ ದಾಖಲಿಸಿದ್ದರು. ಪೊಲೀಸರು ನೀಡಿದ್ದ ನೋಟಿಸ್​ಗೆ ಉತ್ತರಿಸಿದ್ದ ಮಾಲೀಕ, ಮನೆಯಲ್ಲಿ ಬಾಡಿಗೆದಾರ ವೇಶ್ಯಾವಾಟಿಕೆ ನಡೆಸುತ್ತಿರುವುದು ತಮ್ಮ ಅರಿವಿಗೆ ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದರು. ತನಿಖೆ ಪೂರ್ಣಗೊಳಿಸಿದ್ದ ಪೊಲೀಸರು ಅರ್ಜಿದಾರನ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಹೈಕೋರ್ಟ್​ ಹೇಳಿದ್ದೇನು?:ಅರ್ಜಿದಾರ ಮಾಲೀಕತ್ವ ಹೊಂದಿರುವ ಜಾಗದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಆ ಜಾಗದ ಮಾಲೀಕನ ಅರಿವಿಗೆ ಇರಲಿಲ್ಲ ಎಂದು ಪೊಲೀಸರೇ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಮಾನವ ಕಳ್ಳಸಾಗಣೆ (ತಡೆ) ಕಾಯ್ದೆಯ ಸೆಕ್ಷನ್​ 3(2)(ಬಿ) ಪ್ರಕಾರ ಯಾವುದೇ ಜಾಗದ ಮಾಲೀಕನಿಗೆ ಆ ಜಾಗದಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಅರಿವಿದ್ದಾಗ ಮಾತ್ರ ಆತನ ವಿರುದ್ಧ ಪ್ರಕರಣ ದಾಖಲಿಸಬಹುದಾಗಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರು ಬಾಡಿಗೆ ನೀಡಿದ್ದ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಪೊಲೀಸರೇ ಹೇಳಿದ್ದಾರೆ. ಹೀಗಿದ್ದರೂ, ಪ್ರಕರಣ ಮುಂದುವರಿಸಲು ಅವಕಾಶ ನೀಡಿದರೆ ಅರ್ಜಿದಾರರಿಗೆ ಕಿರುಕುಳ ನೀಡಿದಂತಾಗುತ್ತದೆ ಹಾಗೂ ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್​, ಮನೆ ಮಾಲೀಕರ ವಿರುದ್ಧದ ಪ್ರಕರಣ ರದ್ದುಪಡಿಸಿದೆ.
ನಾನು ಸತ್ತ ನಂತ್ರ ಬೇರೆ ಮದ್ವೆ ಆಗಿ ಆಕೆಗೂ ಕಾಟ ಕೊಡ್ಬೇಡ… ಡೆತ್​ನೋಟ್ ಬರೆದು ಬೆಂಗ್ಳೂರಲ್ಲಿ ಪತ್ರಕರ್ತೆ ಆತ್ಮಹತ್ಯೆ

ತಹಸೀಲ್ದಾರ್​ರನ್ನು ಬಂಧಿಸಲು ಮನೆ ಬಾಗಿಲಲ್ಲೇ ಬೆಳಗಿನಜಾವದಿಂದ ಕಾಯುತ್ತಾ ಕುಳಿತ ಎಸ್​ಪಿ!

ಶಾಲಾ ಮಕ್ಕಳಿಗೆ ಕೆಜಿಎಫ್​ ಬಾಬು ನೀಡಿದ್ದ ಚೆಕ್​ಗಳು ಬೌನ್ಸ್!​ ಸಂಕಷ್ಟದಲ್ಲಿ ವಿದ್ಯಾರ್ಥಿಗಳು

ಮುಂದಿನ ಚುನಾವಣೆಯೇ ನನಗೆ ಕೊನೇ… ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ: ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 8 =
Remember me
