ಬೆಂಗಳೂರು:ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಕಾಂತರಾಜ ವರದಿ ಸ್ವೀಕರಿಸಲು ಆಗ್ರಹಿಸಿರುವ ಕುರಿತಂತೆ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಕಾಂತರಾಜ ವರದಿಗೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಸ್ವಲ್ಪಮಟ್ಟಿಗೆ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು ಈಗಿನ ನಿಯಮಗಳ ಪ್ರಕಾರ, ಜಾತಿ ನಮೂದಿಸುವಾಗ ಲಿಂಗಾಯತ ಉಪಪಂಗಡಗಳ ಹೆಸರನ್ನು ನಮೂದಿಸಿದರೆ ಸಮುದಾಯದ ಉಪಪಂಗಡಗಳಿಗೆ ಸೇರಿದವರಿಗೆ ಮೀಸಲಾತಿ ಸಿಗುವುದಿಲ್ಲ. ಆದ್ದರಿಂದ, ಸಮುದಾಯಕ್ಕೆ ಸೇರಿದವರು ಜಾತಿ ನಮೂದಿಸುವಾಗ ಲಿಂಗಾಯತ ಉಪಪಂಗಡದ ಹೆಸರು ಹಾಕುತ್ತಿಲ್ಲ ಎಂದರು.ಇದನ್ನು ಸರಿಪಡಿಸಿದರೆ, ಜಾತಿ ನಮೂದಿಸುವಾಗ ಲಿಂಗಾಯತ ಉಪಪಂಗಡಗಳ ಹೆಸರು ನಮೂದಿಸಲು ಸಾಧ್ಯವಾಗುತ್ತದೆ. ಹೀಗಾದಾಗ, ಸಹಜವಾಗಿಯೇ ಲಿಂಗಾಯತ ಸಮುದಾಯದ ಜನಸಂಖ್ಯೆ ಶೇ. 22ರವರೆಗೆ ಹೆಚ್ಚಾಗುವ ಸಂಭವವಿದೆ ಎಂದು ಅವರು ವಿವರಿಸಿದರು.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಮುಂಚೆ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಹೇಳಿಕೆ ನೀಡಿರುವುದರ ಬಗ್ಗೆ ಕೇಳಿದಾಗ, ಹೌದು, ಅವರು ಹೇಳಿರುವುದು ಐತಿಹಾಸಿಕ ಸತ್ಯ. ಅದು ಎಲ್ಲರಿಗೂ ಗೊತ್ತಿರುವಂತದ್ದೇ. ಅದನ್ನು ಹೇಳುವುದು ತಪ್ಪೇನೂ ಅಲ್ಲ. ಆದರೆ, ಮುಂಚೆ ಮುಂಬೈ, ಹೈದರಾಬಾದ್, ಮದರಾಸ್ ಪ್ರಾಂತ್ಯಕ್ಕೆ ಒಳಪಟ್ಟ ಪ್ರದೇಶಗಳು ಪುನರ್ ವಿಂಗಡಣೆ ನಂತರ ಸಮಗ್ರ ಕರ್ನಾಟಕದ ಭಾಗವಾಗಿವೆ. ಅಂತಹ ಎಲ್ಲಾ ಪ್ರದೇಶಗಳು ಈಗ ಸಮಗ್ರ ಕರ್ನಾಟಕದಲ್ಲೇ ಇವೆ ಎಂದರು.ಸರ್ಕಾರದಲ್ಲಿ ಇನ್ನೂ ಮೂವರು ಡಿಸಿಎಂ ನೇಮಕ ಮಾಡುವ ಬಗ್ಗೆ ಕೇಳಿದ ಪ್ರಶ್ನೆಗೆ, ಇದಕ್ಕೆ ಸಂಬಂಧಿಸಿದಂತೆ ನನ್ನ ನಿಲುವಿನಲ್ಲಿ ಯಾವ ಬದಲಾವಣೆಯೂ ಇಲ್ಲ. ಈ ಬಗ್ಗೆ ಹೈಕಮಾಂಡ್ ಅಭಿಪ್ರಾಯ ಕೇಳಿದರೆ, ಅದನ್ನು ನಾಯಕರ ಮುಂದೆ ನಾಲ್ಕು ಗೋಡೆಗಳ ಮಧ್ಯೆ ತಿಳಿಸುತ್ತೇನೆ. ಅದನ್ನು ಸಾರ್ವಜನಿಕವಾಗಿ ಚರ್ಚಿಸುವುದಿಲ್ಲ ಎಂದು ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five + 12 =
Remember me
