ಬೆಂಗಳೂರುರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ ವೇತನವನ್ನು ದುಪ್ಪಟ್ಟುಗೊಳಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕೋರಿ 7ನೇ ರಾಜ್ಯ ವೇತನ ಆಯೋಗಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಒತ್ತಾಯಿಸಿದೆ.’
ಸಂಘದ ಅಧ್ಯಕ್ಷ ನಾಗೇಶ್ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರ ನೇತೃತ್ವದ ಪದಾಧಿಕಾರಿಗಳ ನಿಯೋಗವು ನಗರದಲ್ಲಿ ಆಯೋಗದ ಸಮಿತಿ ಸದಸ್ಯರನ್ನು ಭೇಟಿ ಮಾಡಿ ವೇತನ ದುಪ್ಪಟ್ಟುಗೊಳಿಸುವುದು ಸೇರಿ ಶಿಕ್ಷಕರ 29 ಬೇಡಿಕೆಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರದ ಶಾಲೆಗಳು ಮತ್ತು ಮಹಾರಾಷ್ಟ್ರ, ತಮಿಳುನಾಡು ಸೇರಿ ಬೇರೆ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಇರುವ ವೇತನ ಶ್ರೇಣಿಯನ್ನು ರಾಜ್ಯದ ಸರ್ಕಾರಿ ಶಿಕ್ಷಕರ ವೇತನ ಶ್ರೇಣಿಯೊಂದಿಗೆ ತಾಳೆ ಹಾಕಿದ ಅಂಕಿ ಅಂಶಗಳ ಮೂಲಕ ಆಯೋಗದ ಗಮನಕ್ಕೆ ತಂದಿದ್ದು, ರಾಜ್ಯದ ಶಿಕ್ಷಕರಿಗೂ ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಮನವಿಯನ್ನು ಆಯೋಗವು ಪುರಸ್ಕರಿಸಿದ್ದೇ ಆದರೆ, ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗಿರುವ ಆರಂಭಿಕ ವೇತನ ಶ್ರೇಣಿ 25,800- 51400 ರಿಂದ 51,600-1,02,800 ರೂ.ಗಳಿಗೆ ಹೆಚ್ಚಿಸಲು ಶಿಫಾರಸು ಮಾಡಬಹುದಾಗಿದೆ.
5ನೇ ವೇತನ ಆಯೋಗದ ಮಾದರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರಿಗೆ ಹೆಚ್ಚಿನ ವೇತನ ಶ್ರೇಣಿ ನೀಡಲು ಪರಿಗಣಿಸದಿದ್ದಲ್ಲಿ ಇತರೆ ಸರ್ಕಾರಿ ನೌಕರರಿಗೆ ನೀಡುವ ವೇತನ ಹೆಚ್ಚಳಕ್ಕಿಂತ ಶೇ.20ರಷ್ಟು ವಿಶೇಷ ವೇತನ ನೀಡುವಂತೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 8 =
Remember me
