ದಾಬಸ್​ಪೇಟೆ(ನೆಲಮಂಗಲ):ಕಲಾತ್ಮಕವಾಗಿ ಸಹಿ ಹಾಕುವ ಮೂಲಕ ಪ್ರಸಿದ್ಧಿ ಪಡೆದಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ನಿವಾಸಿ, ನಿವೃತ್ತ ಉಪನೋಂದಣಾಧಿಕಾರಿ ಶಾಂತಯ್ಯ (61) ಅವರು ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಣ್ಣುಗಳನ್ನು ದಾನ ಮಾಡಿ ಹಲವರ ಬದುಕಿಗೆ ಬೆಳಕು ನೀಡಿದ್ದಾರೆ.
ಉತ್ತರಕನ್ನಡದ ಹೊನ್ನಾವರದಲ್ಲಿ ಉಪನೋಂದಣಾಧಿಕಾರಿ ಆಗಿದ್ದ ಶಾಂತಯ್ಯ, ವರ್ಷದ ಹಿಂದೆ ನಿವೃತ್ತರಾಗಿದ್ದರು. ಯಾರೂ ನಕಲು ಮಾಡಲಾಗದಂತೆ ಹಾಗೂ ಕಲಾತ್ಮಕವಾಗಿ ಸಹಿ ಹಾಕುತ್ತಿದ್ದ ಅವರು ಸಹಿ ಮಾಡಲು ಒಂದು ನಿಮಿಷ ಸಮಯ ತೆಗೆದುಕೊಳ್ಳುತ್ತಿದ್ದರು. ಅವರ ಸಹಿಯ ಶೈಲಿಯನ್ನು ಮೆಚ್ಚಿದ ಹೈಕೋರ್ಟ್​ ನ್ಯಾಯಾಧೀಶರೊಬ್ಬರು ಅವರನ್ನು ಗೌರವಿಸಿದ್ದರು.
ಅನಾರೋಗ್ಯದಿಂದ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಶಾಂತಯ್ಯ ನಿಧನರಾದರು. ಸ್ವಗ್ರಾಮದಲ್ಲಿ ಗುರುವಾರ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿತು. ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಶಾಂತಯ್ಯ ಸಾರ್ಥಕತೆ ಮೆರೆದಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.
ಸಾಗರ ಎಸಿಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್​! ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಾವತಿಸಲು ಸೂಚನೆ

ಯುವತಿ ಜತೆ ಮೈಸೂರಿನ ಲಾಡ್ಜ್​ನಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + four =
Remember me
