ಶಿವಮೊಗ್ಗ:ನಗರದ ಸಿದ್ದಯ್ಯ ರಸ್ತೆ ಮತ್ತು ಎಂಕೆಕೆ ರಸ್ತೆ ಬದಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ 17ಕ್ಕೂ ಹೆಚ್ಚು ಕಾರು, ಆಟೋ, ಬೈಕ್​ಗಳ ಮೇಲೆ ಕಿಡಿಗೇಡಿಗಳಿಬ್ಬರು ಅಟ್ಟಹಾಸ ಮೆರೆದಿದ್ದು, ವಾಹನಗಳನ್ನು ಜಖಂಗೊಳಿಸಿರುವ ಘಟನೆ ನಿನ್ನೆ(ಬುಧವಾರ) ತಡರಾತ್ರಿ ಸಂಭವಿಸಿದೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಹಿಂದೆಯೂ ಇದೇ ರಸ್ತೆಯಲ್ಲಿ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ನಿನ್ನೆ ರಾತ್ರಿ 11 ಕಾರು, 10ಕ್ಕೂ ಹೆಚ್ಚು ಬೈಕ್ ಹಾಗೂ 1 ಆಟೋವಿನ ಗ್ಲಾಸ್ ಒಡೆದು ವಾಹನಗಳನ್ನು ಜಖಂ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಇಂದು ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪದೆಪದೇ ಈ ರೀತಿಯ ಘಟನೆ ನಡೆಯುತ್ತಿರುವುದಕ್ಕೆ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಚಿವರು‌, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಎಸ್​ಪಿ‌ ಲಕ್ಷ್ಮೀಪ್ರಸಾದ್ ಅವರಿಗೆ ಸೂಚಿಸಿದರು.ಇದನ್ನೂ ಓದಿರಿಬಿಜೆಪಿ ಶಾಸಕ ಪಿ.ರಾಜೀವರ ತಾಯಿ ಕರೊನಾಗೆ ಬಲಿ

ಶಿವಮೊಗ್ಗದಲ್ಲಿ ರಾತ್ರಿ ವೇಳೆ ವಾಹನಗಳನ್ನು ಕಿಡಿಗೇಡಿಗಳು ಜಖಂಗೊಳಿಸಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡಿದ್ದಾರೆ. ಈ ಹಿಂದೆ ಕೂಡ ಸಿಗೇಹಟ್ಟಿ ಭಾಗದಲ್ಲಿ ಇಂತಹ ಘಟನೆ ನಡೆದಿತ್ತು. ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಈಗ ಸ್ಥಳಿಯರೇ ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೆಮತ್ತೆ ಈ ರೀತಿ ಘಟನೆ ನಡೆಯುತ್ತಿರುವುದು ದುರಂತ. ಸಮಾಜಘಾತುಕ ಶಕ್ತಿಗಳ ಬಗ್ಗೆ ಪೊಲೀಸ್ ಇಲಾಖೆ ನಿಗಾವಹಿಸಬೇಕು ಎಂದು ಈಶ್ವರಪ್ಪ ಎಚ್ಚರಿಸಿದರು.

ಕೋವಿಡ್ ಸಮಯದಲ್ಲಿ ಪೊಲೀಸರು ಸೇರಿದಂತೆ ಎಲ್ಲರೂ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಇಂಥ ಸಂಕಷ್ಟದ ಸಮಯದಲ್ಲಿ ದ್ರೋಹಿಗಳು ಆಶಾಂತಿ ಸೃಷ್ಟಿಸಲು ಹೊರಟಿದ್ದಾರೆ. ಯಾರು ಮಾಡ್ತಾ ಇದ್ದಾರೆ, ಯಾವ ಉದ್ದೇಶಕ್ಕಾಗಿ ಮಾಡ್ತಿದ್ದಾರೆ ಎಂಬುದು ತನಿಖೆಯಲ್ಲಿ ಬಯಲಾಗಲಿದೆ, ಈ ಹಿಂದೆ ಘಟನೆ ನಡೆದಾಗ ಮುಸ್ಲಿಂ ಯುವಕರು ಭಾಗಿಯಾಗಿದ್ದರು. ಈಗ ಕೂಡ ಇಬ್ಬರು ಮುಸ್ಲಿಂ ಯುವಕರೇ ಸಿಕ್ಕಿದ್ದಾರೆ. ಘಟನೆ ಹಿಂದಿನ ಕುತಂತ್ರ ತಿಳಿದ ಬಳಿಕ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.

ನಿನ್ನೆ ತಡರಾತ್ರಿ ಮನೆ ಎದುರು ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿ ಕಿಡಿಗೇಡಿಗಳು ದಾಂಧಲೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಹನಗಳ ಜತೆ ಕೆಲ ಸಿಸಿ ಕ್ಯಾಮರಾಗಳನ್ನೂ ಒಡೆದು ಹಾಕಿದ್ದಾರೆ. ಈಗಾಗಲೇ ಇಬ್ಬರು ದುಷ್ಕರ್ಮಿಗಳನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − five =
Remember me
