ಬೆಂಗಳೂರು:ಬೆಲ್ ಬಾಟಮ್ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅಭಿನಯದ ಮತ್ತೊಂದು ಸಿನಿಮಾ ‘ಕಾಂತಾರ’. ಮುಂದಿನ ತಿಂಗಳು ಈ ಸಿನಿಮಾ ತೆರೆ ಕಾಣಲಿದ್ದು, ಮೊದಲ ವಿಡಿಯೋ ಸಾಂಗ್​ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ.
ಕಾಂತಾರ ಸಿನಿಮಾದ ‘ಸಿಂಗಾರ ಸಿರಿಯೆ – ಶಿವನೆದೆಯಲಿ ಲೀಲಾಳ ರಸಮಂಜರಿ’ ಎಂಬ ಮೊದಲ ವಿಡಿಯೋ ಹಾಡು ಸ್ವಾತಂತ್ರ್ಯ ದಿನಾಚರಣೆಯಂದು (ಆ.15) ಮಧ್ಯಾಹ್ನ 12.58ಕ್ಕೆ ಬಿಡುಗಡೆಯಾಗಲಿದೆ. ಪ್ರಮೋದ್ ಮರವಂತೆ ಈ ಹಾಡನ್ನು ಬರೆದಿದ್ದು, ಗಾಯಕರಾದ ವಿಜಯ್ ಪ್ರಕಾಶ್, ಅನನ್ಯ ಭಟ್, ನಾಗರಾಜ್ ಪನರ್ ವಲ್ತೂರ್ ದನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಹಿನ್ನೆಲೆ ಸಂಗೀತ ನೀಡಿದ್ದಾರೆ.
ಈ ಮಾಹಿತಿಯನ್ನು ಹೊಂಬಾಳೆ ಫಿಲಂಸ್ ‘ಕೂ’ ವೇದಿಕೆಯಲ್ಲಿ ಹಂಚಿಕೊಂಡಿದ್ದು, The heart notes of Shiva & Leela ಸಿಂಗಾರ ಸಿರಿಯೆ – ಶಿವನೆದೆಯಲಿ ಲೀಲಾಳ ರಸಮಂಜರಿ ಬಿಡುಗಡೆಯಾಗುತ್ತಿದೆ ಎಂದು ಹೇಳಿದೆ.
ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿದ್ದು, ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕಾಂತಾರ ಸೆ.30ರಂದು ಬಿಡುಗಡೆಯಾಗುವ ನಿರೀಕ್ಷೆ ಇದೆ.
–Hombale Films (@HombaleFilms)12 Aug 2022

ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಆ.15ರಂದು BMTC ಬಸ್​​ನಲ್ಲಿ ಇಡೀ ದಿನ ಉಚಿತ ಪ್ರಯಾಣ! ವೋಲ್ವೋ ಬಸ್​ನಲ್ಲೂ ಫ್ರೀ..

ತನಿಖೆಯಲ್ಲಿ ದಕ್ಷತೆ ಮೆರೆದ ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಇಲಾಖೆಯ ಪದಕ

ಎಸಿಬಿ ರಚನೆಯನ್ನೇ ರದ್ದುಪಡಿಸಿದ ಹೈಕೋರ್ಟ್: ಎಲ್ಲ ಕೇಸು ಲೋಕಾಯುಕ್ತಕ್ಕೆ ವರ್ಗಾಯಿಸಲು ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
