ಕೋಲಾರ:ಕೇಂದ್ರ ಮಾಜಿ ಸಚಿವ ಆರ್.ಎಲ್. ಜಾಲಪ್ಪ ನಿಧನದ ಬೆನ್ನಲ್ಲೇ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಅಧಿಕಾರಕ್ಕಾಗಿ ಕಲಹ ಶುರುವಾಗಿದೆ.
ಜಾಲಪ್ಪ ಕಟ್ಟಿ ಬೆಳೆಸಿದ್ದ ಕೋಲಾರ ನಗರ ಹೊರವಲಯದಲ್ಲಿರುವ ಶ್ರೀ ದೇವರಾಜ ಅರಸು ಎಜುಕೇಶನ್ ಟ್ರಸ್ಟ್ ಹಾಗೂ ಮೆಡಿಕಲ್ ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳ ಅಧಿಪತ್ಯಕ್ಕಾಗಿ ಮುಸುಕಿನ ಗುದ್ದಾಟ ಶುರುವಾಗಿದೆ. ಸಂಸ್ಥೆಗೆ ನೂತನ ಅಧ್ಯಕ್ಷರಾಗಿ ಜಾಲಪ್ಪ ಸಂಬಂಧಿ ಜಿ.ಎಚ್. ನಾಗರಾಜ್ ಆಯ್ಕೆ ಆಗಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಜಾಲಪ್ಪನವರ ಕುಟುಂಬದವರಿಗೆ ಟ್ರಸ್ಟ್ ಹಾಗೂ ಸಂಸ್ಥೆಯಲ್ಲಿ ಸೂಕ್ತ ಸ್ಥಾನಮಾನ ನೀಡದೆ ಸರ್ವಾಧಿಕಾರಿ ಧೋರಣೆಯಿಂದ ನಾಗರಾಜ್ ವರ್ತಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಆರ್.ಎಲ್. ಜಾಲಪ್ಪ ಅವರ ಕುಟುಂಬದ ಸದಸ್ಯರನ್ನು ಟ್ರಸ್ಟ್ ಹಾಗೂ ಸಂಸ್ಥೆಗಳಿಂದ ಹೊರಗಿಡಲಾಗಿದೆ. ಜಾಲಪ್ಪ ಅವರ ಹಿರಿಯ ಮಗ, ಮಾಜಿ ಶಾಸಕ ನರಸಿಂಹಸ್ವಾಮಿಗೆ ಅಧ್ಯಕ್ಷ ಪಟ್ಟ ನೀಡುವಂತೆ ಆಗ್ರಹ ಕೇಳಿಬರುತ್ತಿದೆ. ಜಾಲಪ್ಪ ಕುಟುಂಬಸ್ಥರು ಹಾಗೂ ಸಂಸ್ಥೆಯ ಸಿಬ್ಬಂದಿ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪತ್ರ ಹರಿದಾಡುತ್ತಿದೆ.

ಜಾಲಪ್ಪ ಅವರ ಅನುಪಸ್ಥಿತಿಯಲ್ಲಿ ಕಳೆದ 5 ವರ್ಷದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಜಾಲಪ್ಪರ ಮೊಮ್ಮಗ ಅರವಿಂದ್ ಒತ್ತಾಯಿಸಿದ್ದಾರೆ. ಜಾಲಪ್ಪ ಸಂಬಂಧಿ ಎಂದು ಹೇಳಿಕೊಂಡು ಜಿ.ಎಚ್.ನಾಗರಾಜು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಸರ್ಕಾರ ಮಧ್ಯಪ್ರವೇಶ ಮಾಡಿ ಸಮಸ್ಯೆ ಇತ್ಯರ್ಥ ಮಾಡಬೇಕು. ಸಮಸ್ಯೆ ಬಗೆಹರಿಯದಿದ್ದಲ್ಲಿ ವೈದ್ಯಕೀಯ ಕಾಲೇಜಿನ ಉಸ್ತುವಾರಿಯನ್ನ ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಜಾಲಪ್ಪ ಮೆಡಿಕಲ್ ಕಾಲೇಜು ಎದುರು ಜಾಲಪ್ಪರ ಕುಟುಂಬಸ್ಥರು ಹಾಗೂ ಸಿಬ್ಬಂದಿ ಸೋಮವಾರ ಜಮಾಯಿಸಿದ್ದು, ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − four =
Remember me
