ಬೆಳಗಾವಿ:ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 8 ಮಂದಿಗೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯಾಗಿದೆ. ಮತ್ತೊಬ್ಬನಿಗೆ 5 ವರ್ಷ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.
2013ರ ಡಿಸೆಂಬರ್ 21ರಂದು ಅಂಕೋಲಾದಲ್ಲಿ ಕಾರಿನಲ್ಲಿ ಕುಳಿತಿದ್ದ ಆರ್.ಎನ್. ನಾಯಕರನ್ನು ದುಷ್ಕರ್ಮಿಗಳ ತಂಡ ಗುಂಡು ಹಾರಿಸಿ ಕೊಲೆ ಮಾಡಿತ್ತು. ಆರೋಪಿಗಳ ವಿರುದ್ಧ‌ ಪೊಲೀಸರು ಕೋಕಾ ಅಡಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಬನ್ನಂಜೆ ರಾಜ ಸೇರಿ 9 ಮಂದಿಯನ್ನ ದೋಷಿಗಳು ಎಂದು 2022ರ ಮಾರ್ಚ್​ 30ರಂದು ಘೋಷಿಸಿದ್ದ ಬೆಳಗಾವಿಯ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ‌.ಜೋಶಿ, ತೀರ್ಪುನ್ನು ಕಾಯ್ದಿರಿಸಿದ್ದರು.
ಅಪರಾಧಿಗಳಿಗೆ ನ್ಯಾಯಾಧೀಶರು ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಉಡುಪಿ ಮೂಲದ ಬನ್ನಂಜೆ ರಾಜಾ ಹಾಗೂ ಉತ್ತರಪ್ರದೇಶ ಮೂಲದ ಜಗದೀಶ್ ಪಟೇಲ್, ಅಂಕಿತಕುಮಾರ್ ಕಶ್ಯಪ್‌, ಬೆಂಗಳೂರಿನ ಅಭಿ ಬಂಡಗಾರ್, ಉಡುಪಿಯ ಗಣೇಶ್ ಭಜಂತ್ರಿ, ಹಾಸನದ ಮಹೇಶ ಅಚ್ಛಂಗಿ, ಕೇರಳದ ಸಂತೋಷ ಎಂ.ಬಿ., ಬೆಂಗಳೂರಿನ ಜಗದೀಶ್ ಚಂದ್ರರಾಜ್, ಉತ್ತರ ಪ್ರದೇಶದ ಸೇರಿ 8 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇಸ್ಮಾಯಿಲ್​ ಕೆ.ಎಂ. ಎಂಬಾತನಿಗೆ 5 ವರ್ಷ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. 3 ಕೋಟಿ ರೂಪಾಯಿ ಹಫ್ತಾ ನೀಡದಿದ್ದಕ್ಕೆ ಆರ್.ಎನ್.ನಾಯಕ್ ಹತ್ಯೆ ಮಾಡಲಾಗಿತ್ತು.
ನಾನೀಗ ಗರ್ಭಿಣಿ, ನನ್ನನ್ನು ತಬ್ಬಲಿ ಮಾಡಿಬಿಟ್ರು… ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮೇಘನಾ

ಮೇಕೆ ಜೊತೆ ಯುವಕನ ಮದ್ವೆ! ಕುಟುಂಬಸ್ಥರ ಸಮ್ಮುಖದಲ್ಲೇ ತಾಳಿ ಕಟ್ಟಿದ… ಕಾರಣ ಕೇಳಿದ್ರೆ ಹುಬ್ಬೇರಿಸ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
