ಶಿವಮೊಗ್ಗ:ಮಲೆನಾಡು-ಕರಾವಳಿ ಸಹಿತ ಕೆಲ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಭೀತಿ ಉಂಟಾಗಿದೆ. ಶಿವಮೊಗ್ಗದಲ್ಲೂ ವರುಣನ ಆರ್ಭಟ ಜೋರಾಗಿದ್ದು, ಸೊರಬ ತಾಲೂಕಿನ ದೇವತಿಕೊಪ್ಪದಲ್ಲಿ ಕೆರೆ ಏರಿ ಮತ್ತು ಏರಿ ಮೇಲಿನ ರಸ್ತೆ ಯಾವ ಕ್ಷಣದಲ್ಲಾದರೂ ಕುಸಿಯಬಹುದು.
ರಸ್ತೆಯ ಒಂದು ಭಾಗದಲ್ಲಿ ಈಗಾಗಲೇ ಕುಸಿದಿದ್ದು, ಕೆರೆಏರಿ ಒಡೆದರೆ ಮೂರರಿಂದ ನಾಲ್ಕು ಗ್ರಾಮಗಳು ಜಲಾವೃತಗೊಳ್ಳುವ ಆತಂಕ ಇದೆ.
ಸಾಗರ, ಹೊಸನಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲೂಕಿನಲ್ಲಿ ಮುಂಗಾರು ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ನದಿ-ಕೆರೆಗಳು ತುಂಬಿದ್ದು, ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿದೆ. 150 ಎಕರೆ ವಿಸ್ತೀರ್ಣದ, ಸೊರಬ ತಾಲೂಕು ಅಂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವತಿಕೊಪ್ಪ ಗ್ರಾಮದ ದೊಡ್ಡಕೆರೆಯೂ ಕೆರೆಯೂ ಭರ್ತಿಯಾಗಿದ್ದು, ನಿರಂತರ ಮಳೆಗೆ ಕೆರೆ ಏರಿ ಮೇಲಿನ ರಸ್ತೆಯ ಒಂದು ಭಾಗ ಕುಸಿದಿದೆ.

ಒಂದು ವೇಳೆ ಕೆರೆ ಏರಿ ಹೊಡೆದರೆ ಮೂರರಿಂದ ನಾಲ್ಕು ಗ್ರಾಮಗಳು ಜಲಾವೃತಗೊಳ್ಳುವ ಸಾಧ್ಯತೆಯಿದೆ. ಜಮೀನುಗಳೂ ಜಲಾವೃತಗೊಳ್ಳಲಿದೆ. ಸ್ಥಳೀಯರು ಜೀವ ಭೀತಿಯಲ್ಲಿದ್ದಾರೆ. ಅಪಾಯ ಸಂಭವಿಸುವ ಮುನ್ನ ಸಂಬಂಧಪಟ್ಟವರು ದುರಸ್ತಿ ಕಾರ್ಯ ಸೇರಿದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಮಲ್ಪೆ ಕಡಲ ತೀರದಲ್ಲಿ ಬೀಳುತ್ತಿದೆ ಚಿನ್ನ! ಕಸದ ರಾಶಿಯಲ್ಲಿ ಬಂಗಾರದ ಬೇಟೆಗೆ ಮುಗಿಬಿದ್ದ ಜನ

ಮಲ್ಪೆ ಕಡಲ ತೀರದಲ್ಲಿ ಬೀಳುತ್ತಿದೆ ಚಿನ್ನ! ಕಸದ ರಾಶಿಯಲ್ಲಿ ಬಂಗಾರದ ಬೇಟೆಗೆ ಮುಗಿಬಿದ್ದ ಜನ

ಹುಟ್ಟಿನಿಂದ ಕಷ್ಟದಲ್ಲೇ ಬೆಳೆದ ಬಾಲೆಯ ಮೊಗದಲ್ಲಿ ನಗು ಅರಳಿಸಿದ ದಾವಣಗೆರೆ ಎಸ್ಪಿ! ಈ ಸ್ಟೋರಿ ಕೇಳಿದ್ರೆ ಭಾವುಕರಾಗ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
