ಮುಂಬೈ:ಬಿಸಿಸಿಐ(ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ಆಯ್ಕೆಯಾದರು.
ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಂದ ತೆರವಾದ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಮುಂಬೈನಲ್ಲಿ ಮಂಗಳವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರೋಜರ್ ಬಿನ್ನಿ ಅವರನ್ನ ಅವಿರೋಧ ಆಯ್ಕೆ ಮಾಡಲಾಯಿತು.
27 ಟೆಸ್ಟ್ ಮತ್ತು 72 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಬಿನ್ನಿ, ರಾಷ್ಟ್ರೀಯ ಆಯ್ಕೆ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 1983ರ ಏಕದಿನ ವಿಶ್ವಕಪ್‌ ವಿಜೇತ ಭಾರತ ತಂಡದಲ್ಲಿದ್ದ ಬಿನ್ನಿ, ಆ ಟೂರ್ನಿಯಲ್ಲಿ 18 ವಿಕೆಟ್‌ ಪಡೆದು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಮಿಂಚಿದ್ದರು.
ಗಂಗೂಲಿ ಅವರು ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು ಎನ್ನಲಾಗಿತ್ತು. ಆದರೆ ನಂತರದ ವಿದ್ಯಾಮಾನದಲ್ಲಿ ಅವರು ಬೆಂಗಾಲ್ ಕ್ರಿಕೆಟ್​ ಮಂಡಳಿಯ ಅಧ್ಯಕ್ಷರಾಗಲಿದ್ದಾರೆ ಎನ್ನಲಾಗಿದೆ.
ಪಾವಗಡದ ಸೋಲಾರ್ ಪಾರ್ಕ್ ಮುಳುಗಡೆ: ಏಷ್ಯಾದ ಅತಿ ದೊಡ್ಡ ಸೌರ ಘಟಕದಲ್ಲಿ ಯುವಕನೊಬ್ಬ ಈಜಾಡುತ್ತಿರುವ ದೃಶ್ಯ ವೈರಲ್​

ಮತ್ತೊಂದು ಐತಿಹಾಸಿಕ ಹೋರಾಟಕ್ಕೆ ಸಜ್ಜಾಗಿ… ಒಕ್ಕಲಿಗ ಸಮುದಾಯಕ್ಕೆ ಆದಿಚುಂಚನಗಿರಿ ಶ್ರೀಗಳು ಕರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
