ಮೈಸೂರು:ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಜಲಸನ್ನಿಧಿ ಪಾರಂಪರಿಕ ಕಟ್ಟಡವನ್ನು ಪಾರಂಪರಿಕ ಸಂರಕ್ಷಣಾ ಸಮಿತಿ ಅನುಮತಿ ಇಲ್ಲದೆ ನವೀಕರಿಸಿದ ಆರೋಪವನ್ನು ಸಿಂಧೂರಿ ಎದುರಿಸುತ್ತಿದ್ದು, ಈ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದೆ.
ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಪಾರಂಪರಿಕ ಕಟ್ಟಡವಾಗಿದೆ. ಅಲ್ಲಿ ಯಾವುದೇ ಹೊಸ ಕಾಮಗಾರಿ ಕೈಗೊಳ್ಳಬೇಕಾದರೆ ಪಾರಂಪರಿಕ ಸಂರಕ್ಷಣಾ ಸಮಿತಿ ಅನುಮತಿ ಕಡ್ಡಾಯ. ಆದರೆ, ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭ ಈ ನಿಯಮಗಳನ್ನು ಗಾಳಿಗೆ ತೂರಿ ಜಲಸನ್ನಿಧಿ ನಿವಾಸವನ್ನು ನವೀಕರಿಸಿದ್ದಾರೆ. ಅಲ್ಲದೆ, ಜಲ ಸನ್ನಿಧಿಯಲ್ಲಿ ನೆಲಹಾಸಿಗೆ ವಿಟ್ರಿಫೈಡ್ ಟೈಲ್ಸ್ ಅಳವಡಿಕೆ ಮಾಡಲಾಗಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಸಾ.ರಾ. ಮಹೇಶ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೈಸೂರು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ. ಇದೇ ರೀತಿ ಜಲಸನ್ನಿಧಿಯ ಈಜುಕೊಳವನ್ನು ನಿಯಮಬಾಹಿರವಾಗಿ ನಿರ್ವಿುಸಿದ ಆರೋಪವನ್ನು ರೋಹಿಣಿ ಸಿಂಧೂರಿ ಎದುರಿಸುತ್ತಿದ್ದು, ಈ ಬಗ್ಗೆ ಕೂಡ ತನಿಖೆ ನಡೆದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ.
ಮದುವೆ ಆದ ದಿನವೇ ವರನ ದುರಂತ ಸಾವು! ಮೊದಲ ರಾತ್ರಿ ಆ ಕೋಣೆಯಲ್ಲಿ ಆಗಿದ್ದೇನು?

ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

ಕೆಲಸಕ್ಕಾಗಿ ಮನೆಗೆ ಬಂದ ಯುವತಿಗೆ ಗ್ರಾಪಂ ಸದಸ್ಯ ಹೀಗಾ ಮಾಡ್ಹೋದು? ಈ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

rohini
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 10 =
Remember me
