ಮೈಸೂರು:ಸಾವಿನ ಸಂಖ್ಯೆಯನ್ನು ಏಕೆ ಮುಚ್ಚಿಡುತ್ತಿದ್ದೀರಿ? ನಿಮಗೆ ಮಾನವೀಯತೆ, ಮನುಷ್ಯತ್ವ, ತಾಯಿ ಹೃದಯ ಇಲ್ಲವೇ? ಸರ್ಕಾರವನ್ನೂ ಏಕೆ ದಿಕ್ಕು ತಪ್ಪಿಸುತ್ತಿದ್ದೀರಿ? ಸಾವಿನಲ್ಲೂ ಸುಳ್ಳು ಲೆಕ್ಕ ಕೊಟ್ಟಿದ್ದೇಕೆ? ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ಶಾಸಕ ಸಾ.ರಾ.ಮಹೇಶ್​ ಖಾರವಾಗಿಯೇ ಪ್ರಶ್ನಿಸಿದ್ದಾರೆ.
ಜಿಲ್ಲೆಯಲ್ಲಿನ ಕರೊನಾ ಸ್ಥಿತಿ-ಗತಿ, ಸಾವು-ನೋವಿನ ಅಂಕಿಅಂಶ ಸಹಿತ ಮೈಸೂರು ಜಿಲ್ಲಾಡಳಿತ ನಿನ್ನೆ ಮಾಹಿತಿ ಬಿಡುಗಡೆ ಮಾಡಿತ್ತು. ಈ ಕುರಿತು ಮರುದಿವನೇ ಅಂದರೆ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಸಾ.ರಾ. ಮಹೇಶ್​, ರೋಹಿಣಿ ಸಿಂಧೂರಿ ಅವರಿಂದ ಸರ್ಕಾರಕ್ಕೆ ಸುಳ್ಳು ಲೆಕ್ಕ ಕೊಡಲಾಗಿದೆ. ಮೈಸೂರು ಜಿಲ್ಲೆ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಮೈಸೂರು ಜಿಲ್ಲೆ ನಂ 1. ಅತಿಹೆಚ್ಚು ಸಾವು ಆಗಿರುವ ಜಿಲ್ಲೆಗಳಲ್ಲೂ ಮೈಸೂರು ನಂ 1. ಆದರೂ ಸುಳ್ಳು ಲೆಕ್ಕ ಕೊಟ್ಟ ಸರ್ಕಾರದ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ಇದನ್ನೂ ಓದಿರಿಹಸಿವು ಸಹಿಸಲಾಗ್ತಿಲ್ಲ, ನಮ್ಗೆ ಕರೊನಾ ಸೋಂಕಾದರೂ ಬರಲಿ.. ಆಸ್ಪತ್ರೆಯಲ್ಲಿ ಒಪ್ಪೊತ್ತಿನ ಊಟವಾದ್ರೂ ಸಿಗುತ್ತೆ…
ಮೈಸೂರು ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಇಳಿಸಿದ್ದೇವೆ, ಮೈಸೂರಿನಲ್ಲಿ ನಾನು ಸಾಧನೆ ಮಾಡಿದ್ದೇನೆ ಅಂತ ತೋರಿಸಿಕೊಳ್ಳುತ್ತಿದ್ದಾರೆ. ಟೆಸ್ಟಿಂಗ್ ಕಡಿಮೆ ಮಾಡಿದ ಪರಿಣಾಮ ಕೇಸ್ ಕಡಿಮೆ ಆಗಿದೆ. ಈ ವಿಚಾರವನ್ನು ನಾನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರ ಸೂಚನೆ ಬಳಿಕ 8000 ಟೆಸ್ಟಿಂಗ್ ಶುರುವಾಗಿದೆ. ನಗರದಲ್ಲಿ ಕರೊನಾದಿಂದ ಮೃತಪಟ್ಟಿರುವ ಸಂಖ್ಯೆಯ ದಾಖಲೆ ತೆಗೆಸಿದ್ದೇನೆ. ಇನ್ನು ಮೈಸೂರು ಜಿಲ್ಲೆಯಲ್ಲಿ ಎಷ್ಟು ಸಾವಿರ ಜನ ಸತ್ತಿದ್ದಾರೋ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಅದರ ಮಾಹಿತಿಯನ್ನೂ ತರಿಸುತ್ತೇನೆ. ನಿನ್ನೆ ಕೆ.ಆರ್.ನಗರದಲ್ಲಿ ಸಾವು ಝೀರೋ ಅಂತ ಲೆಕ್ಕ ತೋರಿಸಿದ್ದಾರೆ. ಆದರೆ ನನ್ನ ಗಮನಕ್ಕೆ ಬಂದಂತೆ ಚಿಕ್ಕನಾಯಕನಹಳ್ಳಿಯಲ್ಲಿ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಲಾಗಿದೆ. ಏಕೆ ಸಾವುಗಳನ್ನು ಮುಚ್ಚಿಡುತ್ತಿದ್ದೀರಿ? ಮೃತರ ಕುಟುಂಬಗಳಿಗೆ ಯಾವುದಾದರೂ ರೂಪದಲ್ಲಿ ಸಹಾಯ ಆಗಬೇಕಲ್ವ? ನಿಮ್ಮ ಸುಳ್ಳು ಲೆಕ್ಕದಿಂದಾಗಿ ಮೃತರ ಕುಟುಂಬಸ್ಥರಿಗೆ ಮೋಸ ಆಗೋದು ಬೇಡ ಎಂದು ರೋಹಿಣಿ ಸಿಂಧೂರಿ ವಿರುದ್ಧ ಸಾ.ರಾ.ಮಹೇಶ್​ ಕಿಡಿಕಾರಿದ್ದರು.
ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಡಿಸಿ ವಿರುದ್ಧ ಕೂಡಲೇ ತನಿಖೆಗೆ ಆದೇಶ ಮಾಡಬೇಕು ಎಂದು ಶಾಸಕ ಸಾ.ರಾ.ಮಹೇಶ್ ಆಗ್ರಹಿಸಿದರು. ಇದು ಸತ್ತ ಕುಟುಂಬಸ್ಥರ ಮಾನವ ಹಕ್ಕುಗಳ ಉಲ್ಲಂಘನೆ ಅಲ್ಲವೇ? ಸತ್ಯ ವರದಿ ಮಾಡಿದ್ದರೆ ಮುಖ್ಯಮಂತ್ರಿ, ಸಚಿವರು ಅಥವಾ ಯಾರಾದರೂ ಮೈಸೂರಿಗೆ ಏನು ಕೆಲಸ ಆಗಬೇಕು ಅದನ್ನು ಮಾಡುತ್ತಿದ್ದರು. ಈ ಎಲ್ಲ ದಾಖಲೆಗಳನ್ನೂ ನಾನು ಮಾನವ ಹಕ್ಕು ಆಯೋಗ, ರಾಜ್ಯಪಾಲರು, ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡುತ್ತೇನೆ ಎಂದರು.
ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಹಸಿವು ಸಹಿಸಲಾಗ್ತಿಲ್ಲ, ನಮ್ಗೆ ಕರೊನಾ ಸೋಂಕಾದರೂ ಬರಲಿ.. ಆಸ್ಪತ್ರೆಯಲ್ಲಿ ಒಪ್ಪೊತ್ತಿನ ಊಟವಾದ್ರೂ ಸಿಗುತ್ತೆ…

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಸಂಸ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
