ಮಂಡ್ಯ:ಈಶ್ವರನ ದೇವಸ್ಥಾನದಲ್ಲಿ ಹಾಡಹಗಲೇ ಇಂದು(ಸೋಮವಾರ) ಬೆಳ್ಳಂಬೆಳಗ್ಗೆ ಕುಖ್ಯಾತ ರೌಡಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಸ್ಥಳೀಯ ಜನತೆ ಬೆಚ್ಚಿಬಿದ್ದಿದ್ದಾರೆ.
ಅರುಣ್ ಅಲಿಯಾಸ್​ ಅಲ್ಲು(38) ಕೊಲೆಯಾದ ರೌಡಿ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಪಟ್ಟಣದ ಈಶ್ವರನ ದೇವಸ್ಥಾನದ ಆವರಣದಲ್ಲೇ ಐವರು ದುಷ್ಕರ್ಮಿಗಳ ತಂಡ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾ ಡಿ ಪರಾರಿಯಾಗಿದ್ದಾರೆ.
ಕೊಲೆ, ಅಪಹರಣ, ಕೊಲೆ ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಅರುಣ್ ಅಲಿಯಾಸ್​ ಅಲ್ಲು ಜೈಲಿನಲ್ಲಿದ್ದಾಗಲೇ ಅಧಿಕಾರಿಯ ಸಹಾಯ ಪಡೆದು ಮಾರ್ವಾಡಿಯನ್ನು ಕಿಡ್ನ್ಯಾಪ್ ಮಾಡಿದ್ದ. ಈ ಪ್ರಕರಣದಲ್ಲಿ ಜೈಲು ಅಧಿಕಾರಿಗೂ ಶಿಕ್ಷೆಯಾಗಿತ್ತು. ಎರಡನೇ ದರ್ಜೆ ರಾಜಕಾರಣಿಗಳಿಂದಲೂ ಅರುಣ್​ ಹಫ್ತಾ ವಸೂಲಿ ಮಾಡಿದ್ದ. ಜೈಲಿನಿಂದ ಬಂದ ಬಳಿಕ ಅರುಣನನ್ನು ಪೊಲೀಸರು ಗಡಿಪಾರು ಮಾಡಿದ್ದರು.
ಅತ್ತ ರೌಡಿ ಅರುಣ್​ನ ಹತ್ಯೆಗೆ ಹಲವು ವರ್ಷಗಳಿಂದಲೂ ಕೆಲವರು ಸ್ಕೆಚ್ ಹಾಕಿದ್ದರು. ಹಳೇ ದ್ವೇಷದ ಹಿನ್ನೆಲೆ ಐದು ಮಂದಿಯ ಗ್ಯಾಂಗ್, ಇಂದು ಬೆಳಗ್ಗೆ ಈಶ್ವರ ದೇಗುಲದ ಆವರಣದಲ್ಲೇ ಅರುಣ್​ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಪರಾರಿಯಾಗಿದೆ. ರಕ್ತಸಿಕ್ತವಾದ ಮೃತದೇಹ ಕಂಡ ಜನ ಬೆಚ್ಚಿಬಿದ್ದಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗಾರರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

ತುಮಕೂರಲ್ಲಿ ಗೆದ್ದರೆ ರಾಜ್ಯವನ್ನೇ ಗೆದ್ದಂತೆ… ಮನೆಗೆ ಬಂದ ಲಕ್ಷ್ಮೀಯನ್ನು ಒಳಗೆ ಕರೆದುಕೊಳ್ಳಿ: ಡಿಕೆಶಿ

ಕಂಠದಲ್ಲಿ ಶ್ರೀಕೃಷ್ಣ! ಗಂಟಲು ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 13 =
Remember me
