ವಿಜಯಪುರ:ಬಿಜೆಪಿ ಕಾರ್ಯಕರ್ಯರ ಸಭೆಯಲ್ಲಿ ಯತ್ನಾಳ ಬೆಂಬಲಿಗರು ದಾಂಧಲೆ ನಡೆಸಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಘಟನೆ ನಡೆಯಿತು.
ನಗರದ ಸಂಗನಬಸವ ಮಂಗಲ ಕಾರ್ಯಾಲಯದಲ್ಲಿ ಸೋಮವಾರ ಸಂಜೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ‌ ಭಾಷಣ ಮುಗಿಯುತ್ತಿದ್ದಂತೆ ವೇದಿಕೆ ಎದುರು ಆಗಮಿಸಿದ ಕಾರ್ಯಕರ್ತರು ಬಿಆರ್ ಪಿ….ಬಿಆರ್ ಪಿ ಎಂದು ಘೋಷಿಸಿ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದರು‌.

ನಿಗದಿತ ಅವಧಿಗಿಂತ ತಡವಾಗಿ ಆರಂಭಗೊಂಡ ಕಾರ್ಯಕ್ರಮ ಕ್ಕೆ ಶಾಸಕ ಯತ್ನಾಳ ಗೈರಾಗಿದ್ದರು. ಬಳಿಕ ಕಾರ್ಯಕ್ರಮ ಆರಂಭಗೊಳ್ಳಿತ್ತಿದ್ದಂತೆ ಕಾರ್ಯಕರ್ತರು ಜಮಾಯಿಸಿ ಆಕ್ರೋಶ ಹೊರಹಾಕಿದರು. ಯತ್ನಾಳ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಮನವರಿಕೆ ಮಾಡಿದರೂ ಕ್ಯಾರೆ ಎನ್ನದ ಕಾರ್ಯಕರ್ತರು ಚಪ್ಪಾಳೆ ತಟ್ಟಿ, ಘೋಷಣೆ ಮೊಳಗಿಸಿದರು. ಕೇಕೆ, ಸಿಳ್ಳೆ ಹಾಕಿ ಕಾರ್ಯಕ್ರಮಕ್ಕೆ ತಡೆಯೊಡ್ಡಿದರು. ಕಾರ್ಯಕರ್ತರನ್ನು ನಿಭಾಯಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಮುರುಗೇಶ ನಿರಾಣಿ, ಸಂಸದ ರಮೇಶ ಜಿಗಿಜಿಣಗಿ ಮತ್ತಿತರ ನಾಯಕರು ವೇದಿಕೆ ಮೇಲಿದ್ದರಲ್ಲದೇ ಘಟನೆಯಿಂದ ಮುಜುಗರ ಅನುಭವಿಸಿದರು. ಬಳಿಕ ವೇದಿಕೆ ಮೇಲಿದ್ದ ಬಹುತೇಕ ನಾಯಕರು ನಿರ್ಗಮಿಸಿದರು.
ಬಾಗಲಕೋಟೆಯಲ್ಲಿಯೂ ಕೂಡಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಗದ್ದಲ ಗಲಾಟೆಯಾಗಿದೆ. ಬಾಗಲಕೋಟೆ ಮತಕ್ಷೇತ್ರದ ಕಾರ್ಯಕರ್ತನಿಂದ ಮಾಜಿ ಸಚಿವ ಮುರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿ ಪಡಿಸಲಾಗಿದೆ. ಮಾಜಿ ಸಿಎಂ, ಮಾಜಿ ಸಚಿವರು, ಮಾಜಿ ಶಾಸಕರು ಇರುವ ವೇದಿಕೆಯಲ್ಲಿ ಗಲಾಟೆಯಾಗಿದೆ.
ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟಿ ಕೀರ್ತಿ ಸುರೇಶ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + five =
Remember me
