ಹಾವೇರಿ:ಯುದ್ಧಪೀಡಿತ ಯೂಕ್ರೇನ್​ನಲ್ಲಿ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ, ಹಾವೇರಿ ಜಿಲ್ಲೆಯ ನವೀನ್ ಗ್ಯಾನಗೌಡರ ದುರಂತ ಅಂತ್ಯ ಕಂಡ ಸುದ್ದಿ ಆಘಾತ ಉಂಟುಮಾಡಿದೆ. ಮಗನನ್ನು ಡಾಕ್ಟರ್​ ಮಾಡಿಸುವ ಕನಸು ಹೊತ್ತು ಯೂಕ್ರೇನ್​ಗೆ ವಿದ್ಯಾಭ್ಯಾಸಕ್ಕೆಂದು ಕಳಿಸಿದ್ದ ಪಾಲಕರಿಗೀಗ ಮಗನ ಸಾವಿನ ಸುದ್ದಿ ಬರಸಿಡಿಲಿನಂತೆ ಬಂದೆರಗಿದೆ. ಈ ಸುದ್ಧಿ ತಿಳಿಯುತ್ತಿದ್ದಂತೆ ಮೃತನ ತಂದೆಗೆ ಸಿಎಂ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.
ನವೀನ ಅವರ ಶೇಖರಗೌಡ ಅವರಿಗೆ ಕರೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದು ನಿಜಕ್ಕೂ ದೊಡ್ಡ ದುರಂತ. ದೇವರು ನವೀನರ ಆತ್ಮಕ್ಕೆ ಶಾಂತಿ ನೀಡಲಿ. ನೀವು ಧೈರ್ಯದಿಂದ ಇರಬೇಕು. ನವೀನನ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆದಿದೆ. ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಮಗನನ್ನು ಕಳೆದುಕೊಂಡ ನೋವಲ್ಲೇ ಸಿಎಂ ಜತೆ ಮಾತನಾಡಿದ ಶೇಖರಗೌಡ, ಇಂದು ಮುಂಜಾನೆ ನನ್ನ ಮಗ ದೂರವಾಣಿ ಕರೆ ಮಾಡಿದ್ದ. ಪ್ರತಿ ದಿನ ಎರಡ್ಮೂರು ಬಾರಿ ದೂರವಾಣಿ ಮೂಲಕ ಮಾತಾಡುತ್ತಿದ್ದ. ಆದರೀಗ… ಎನ್ನುತ್ತಲೇ ಕಣ್ಣೀರಿಟ್ಟರು.
ಯೂಕ್ರೇನ್​ನಲ್ಲಿ ಕ್ಷಿಪಣಿ ದಾಳಿಗೆ ​ಕನ್ನಡಿಗ ಬಲಿ: ಮುಗಿಲು ಮುಟ್ಟಿದೆ ಪಾಲಕರ ಆಕ್ರಂದನ

ಆಳಂದದಲ್ಲಿ ಉದ್ವಿಗ್ನ ಸ್ಥಿತಿ: ಶಿವಪೂಜೆ ಮಾಡಲು ಬಂದ ಹಿಂದೂ ಕಾರ್ಯಕರ್ತರಿಗೆ ಅರ್ಧದಲ್ಲೇ ತಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
