ಬೆಂಗಳೂರು:ಯೂಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯವೇನು? ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
‘ಆಪರೇಷನ್‌ ಗಂಗಾ’ ಹೆಸರಿನಲ್ಲಿ ಕೇಂದ್ರ ಸರ್ಕಾರ ಯೂಕ್ರೇನ್​ನಿಂದ ವಿದ್ಯಾರ್ಥಿಗಳನ್ನು ಏರ್​ಲಿಫ್ಟ್‌ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಗತಿಯೇನು? ಎಂದು ಸರಣಿ ಟ್ವೀಟ್​ ಮೂಲಕ ಕೇಳಿದ್ದಾರೆ.
ಪೋಷಕರು ಸಾಲ ಮಾಡಿ ಮಕ್ಕಳನ್ನು ಯೂಕ್ರೇನ್​ಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ. ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜು ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ. 2,65,720 ಕೋಟಿ ರೂ.ಬಜೆಟ್‌ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರ್ಕಾರವೇ ನೀಡಲಿ. ನೀಟ್‌ ಮೂಲಕ ಶೇ.50 ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರ್ಕಾರಗಳು ಅಂತಃಕರಣದಿಂದ ಆಲೋಚಿಸಲಿ ಎಂದು ಎಚ್​ಡಿಕೆ ಸಲಹೆ ಕೊಟ್ಟಿದ್ದಾರೆ.
'ಆಪರೇಷನ್‌ ಗಂಗಾ' ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್‌ʼನಿಂದ ವಿದ್ಯಾರ್ಥಿಗಳನ್ನು ಏರ್‌ʼಲಿಫ್ಟ್‌ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. 1/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)March 7, 2022

‘ವೈದ್ಯೋ ನಾರಾಯಣೋ ಹರಿಃʼಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು? ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು? ಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ. ಕೇಂದ್ರ-ರಾಜ್ಯ ಸರ್ಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.
ಇನ್ನು 2 ತಿಂಗಳು ಕಳೆದಿದ್ರೆ ಡಾಕ್ಟರ್ ಆಗಿ ತಾಯ್ನಾಡಿಗೆ ಬರ್ತಿದ್ದೆ.. ಭಾರತೀಯ ರಾಯಭಾರ ಕಚೇರಿಯವರೇ ಓಡಿ ಹೋಗಿದ್ದಾರೆ…

ಬಾಳೆಹಣ್ಣು ಕೊಟ್ಟ ಆಟೋ ಡ್ರೈವರ್​ನ​ ಬೆನ್ನೇರಿದ ಕೋತಿ! ಎಲ್ಲೇ ಹೋದ್ರೂ ಬಿಡ್ತಿಲ್ಲ… ಮನೆಗೇ ಬರುತ್ತೆ…

ಇಂದಿನಿಂದ 3 ದಿನ ಕರ್ನಾಟಕದ ಹಲವೆಡೆ ಮಳೆ! ತಮಿಳುನಾಡು, ಕೇರಳದಲ್ಲೂ ಮಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − three =
Remember me
