ಶಿವಮೊಗ್ಗ:ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಬಸ್​ ಮಾಲೀಕ ಪ್ರಕಾಶ್ (54) ಶವವಾಗಿ ಪತ್ತೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕರಾಗಿದ್ದ ಪ್ರಕಾಶ್​, ಜ.21ರ ಸಂಜೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ಮಿಸ್ಸಿಂಗ್​ ಕೇಸ್​ ದಾಖಲಿಸಿದ್ದರು. ಶನಿವಾರ ಸಂಜೆ ಪ್ರಕಾಶ್ ಅವರ ಕಾರು, ಮೊಬೈಲ್ ಫೋನ್ ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿತ್ತು. ಕಾರಿನಿಂದ ಸ್ವಲ್ಪ ದೂರದಲ್ಲಿ ಸೇತುವೆ ಮೇಲೆ ಚಪ್ಪಲಿ ಕೂಡ ಸಿಕ್ಕಿತ್ತು.
ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಪ್ರಕಾಶ್​ಗಾಗಿ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದರು. ಸೋಮವಾರ ಬೆಳಗ್ಗೆ ಬಸ್ ಮಾಲೀಕ ಪ್ರಕಾಶ್ ಶವ ಪತ್ತೆಯಾಗಿದೆ. ಪ್ರಕಾಶ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಶಿವಮೊಗ್ಗದ ಸಾಗರ ಭಾಗದಲ್ಲಿ ಸುಮಾರು 20 ವರ್ಷದಿಂದ ಬಸ್​ಗಳ ಸೇವೆ ಒದಗಿಸುತ್ತಿದೆ ಪ್ರಕಾಶ್ ಟ್ರಾವೆಲ್ಸ್. ಕರೊನಾ ಲಾಕ್​ಡೌನ್ ಆದ ಬಳಿಕ ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆಗೆ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿತ್ತು ಎನ್ನಲಾಗಿದೆ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್​ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ. ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಸಿದ್ಧಗಂಗಾ ಮಠದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: ಭಯದ ವಾತಾವರಣ ಸೃಷ್ಟಿ

10 ರೂ. ಕೊಡೋ ಯೋಗ್ಯತೆ ಇಲ್ಲ, ಕಾರ್ ತಗೋತೀಯಾ? ಎಂದ ಶೋ ರೂಂ ಸಿಬ್ಬಂದಿಗೆ 1 ತಾಸಲ್ಲೇ ಶಾಕ್​ ಕೊಟ್ಟ ಯುವರೈತ!

ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡ ಈ ದಂಪತಿ ಅಸಹ್ಯ ಕೆಲಸ ಮಾಡಿಬಿಟ್ರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 3 =
Remember me
