ಅಥಣಿ (ಬೆಳಗಾವಿ):ಅಥಣಿ ತಾಲೂಕಿನ ಹಲ್ಯಾಳ ಸಮೀಪದ ಕೃಷ್ಣಾ ನದಿಯಲ್ಲಿ ಹಾಸಿಗೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ದುರಂತ ಅಂತ್ಯ ಕಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹಲ್ಯಾಳ ಗ್ರಾಮದ ಪರಸಪ್ಪ ಗೋಪಾಲ ಬನಸೂಡೆ (42), ಸದಾಶಿವ ಗೋಪಾಲ ಬನಸೋಡೆ (36), ಧರೆಪ್ಪ ಗೋಪಾಲ ಬನಸೋಡೆ (25) ಹಾಗೂ ಶಂಕರ ಗೋಪಾಲ ಬನಸೋಡೆ(23) ಮೃತ ದುರ್ದೈವಿಗಳು.
ಲಾಲಸಾಬ್ ಉರುಸ್ ಹಿನ್ನೆಲೆಯಲ್ಲಿ ಬಟ್ಟೆ ಮತ್ತು ಹಾಸಿಗೆ ತೊಳೆಯಲು ಈ ನಾಲ್ವರು ಸಹೋದರರು ಕೃಷ್ಣಾ ನದಿಗೆ ಸೋಮವಾರ ತೆರಳಿದ್ದರು. ಧರೆಪ್ಪ ಎಂಬಾತ ಮೊದಲು ಕಾಲು ಜಾರಿ ನದಿಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಉಳಿದ ಮೂವರೂ ನದಿಗೆ ಹಾರಿದ್ದಾರೆ. ಆದರೆ, ನಾಲ್ವರೂ ನೀರಿನಲ್ಲಿ ಕೊಚ್ಚಿಹೋಗಿದ್ದರು. ಅವರ ಪತ್ತೆಗೆ ಅಂದೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ಈಜುಗಾರರು ಶೋಧ ಮುಂದುವರಿಸಿದ್ದರಾದರೂ ಪತ್ತೆಯಾಗಿರಲಿಲ್ಲ.
ಮಂಗಳವಾರ ಮಧ್ಯಾಹ್ನ ಪರಶುರಾಮ ಗೋಪಾಲ ಬನಸೋಡೆ ಎಂಬಾತನ ಮೃತದೇಹ ಪತ್ತೆಯಾಗಿತ್ತು. ಬುಧವಾರ ಮೂವರ ಶವಗಳನ್ನು ಎನ್​ಡಿಆರ್​ಎಫ್ ಹಾಗೂ ಸ್ಥಳೀಯರು ಹೊರ ತೆಗೆದಿದ್ದಾರೆ. ಸಹೋದರರ ಶವಗಳು ಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಧಿಕಾರಿಗಳು, ಗ್ರಾಮಸ್ಥರು ಎಷ್ಟೇ ಸಂತೈಸಿದರೂ ಅವರ ಕಣ್ಣೀರಧಾರೆ ನಿಲ್ಲುತ್ತಿಲ್ಲ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಮೂತ್ರ ವಿಸರ್ಜನೆ ಮಾಡುತ್ತಲೇ ಯುವಕರಿಬ್ಬರು ದುರಂತ ಸಾವು! ದೇವರೇ ಈ ಸಾವು ನ್ಯಾಯವೇ…

ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
