ಬೆಳಗಾವಿ:ಸಾಲವಾಗಿ ಕೊಟ್ಟ ಹಣವನ್ನು ವಾಪಸ್​ ಕೊಡಿ ಎಂದ ಮಹಿಳೆಯನ್ನು ಗುಂಡಿಕ್ಕಿ ಕೊಂದ ಆರೋಪಿ, ಪುರಸಭೆ ಸದಸ್ಯ ಉಮೇಶ ಕಾಂಬಳೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಶೈಲಾ ಸುಬೇದಾರ್ ಬಡ್ಡಿ ವ್ಯವಹಾರ ಮಾಡಿಕೊಂಡು ಸಂಕೇಶ್ವರದಲ್ಲಿ ನೆಲೆಸಿದ್ದಳು. ಜ.16ರಂದು ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಈಕೆಯನ್ನು ಗುಂಡಿಕ್ಕಿ ಕೊಂದು ಪರಾರಿಯಾಗಿದ್ದರು. ಮಿಂಚಿನ ಕಾರ್ಯಾಚರಣೆ ನಡೆಸಿದ ಸಂಕೇಶ್ವರ ಠಾಣೆ ಪೊಲೀಸರು ಸಂಕೇಶ್ವರದ 14ನೇ ಸದಸ್ಯ ಉಮೇಶ ಕಾಂಬಳೆ ಎಂಬಾತನನ್ನು ಬಂಧಿಸಿದ್ದಾರೆ.
ಶೈಲಾ ಸುಬೇದಾರ್ ಬಳಿ ಉಮೇಶ ಕಾಂಬಳೆ 25 ಲಕ್ಷ ರೂ. ಪಡೆದಿದ್ದ. ಬಡ್ಡಿ ಸಮೇತ ಹಣ ವಾಪಸ್​ ಕೊಡುವಂತೆ ಉಮೇಶಗೆ ಶೈಲಾ ಕೇಳಿದ್ದರಂತೆ. ಇದಕ್ಕೆ ಸಿಟ್ಟಾದ ಉಮೇಶ ತನ್ನ ಸಹಚರರಿಬ್ಬರ ಜತೆ ಸೇರಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಮತ್ತಿಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ದೂರು ನೀಡಲು ಬಂದಾಕೆಯನ್ನೇ ಮಂಚಕ್ಕೆ ಕರೆದ ಪೊಲೀಸ್​ ಇನ್​ಸ್ಪೆಕ್ಟರ್​! ಸಂತ್ರಸ್ತೆ ಬಿಚ್ಚಿಟ್ಟ ನೋವು ಇಲ್ಲಿದೆ

ಅಯ್ಯೋ ವಿಧಿಯೇ ನೀನೆಷ್ಟು ಕ್ರೂರಿ? ನನ್ನ ಹೊಟ್ಟೆಯಲ್ಲಿದ್ದ 7 ತಿಂಗಳ ಮಗುವನ್ನೂ ಕಿತ್ತುಕೊಂಡೆ.. ಈಗ ಗಂಡನ ಪ್ರಾಣವನ್ನೂ ತೆಗೆದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − six =
Remember me
