ಉಡುಪಿ:ಸ್ವಾತಂತ್ರ್ಯಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬ್ರಹ್ಮಗಿರಿ ಸರ್ಕಲ್​ನಲ್ಲಿ ಹಿಂದೂ ಮಹಾಸಭಾ ಮುಖಂಡರು ವೀರ ಸಾವರ್ಕರ್​ ಭಾವಚಿತ್ರವಿರುವ ಫ್ಲೆಕ್ಸ್ ಅಳವಡಿಸಿದ್ದು, ಇದಕ್ಕೆ ಪಿಎಫ್ಐ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್​ ಅನ್ನು ತೆರವು ಮಾಡುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದೆ.
ಶಿವಮೊಗ್ಗದಲ್ಲಿ ಸಾರ್ವಕರ್ ಭಾವಚಿತ್ರವುಳ್ಳ ಫ್ಲೆಕ್ಸ್​ ತೆರವು ಸಂಬಂಧ ನಡೆದ ಗಲಾಟೆಯಲ್ಲಿ ಚಾಕು ಇರಿದಿರುವ ಪ್ರಕರಣ ಬಿಗುವಿನ ವಾತಾವರಣ ನಿರ್ಮಿಸಿದೆ. ಇದರ ಬೆನ್ನಲ್ಲೇ ತುಮಕೂರು ನಗರದ ಎಂಪ್ರೆಸ್​ ಕಾಲೇಜು ಬಳಿಯೂ ಸಾರ್ವಕರ್ ಭಾವಚಿತ್ರವಿದ್ದ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ಬಳಿಕ ಉಡುಪಿಯಲ್ಲೂ ವಿವಾದ ಶುರುವಾಗಿದೆ. ಹೀಗಾಗಿ ಉಡುಪಿಯಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಉಡುಪಿ ನಗರಸಭೆಯ ಅನುಮತಿ ಪಡೆದು ಫ್ಲೆಕ್ಸ್ ಅಳವಡಿಸಲಾಗಿದ್ದು, ಇದನ್ನು ತೆರವು ಮಾಡಲು 10 ದಿನಗಳ ಕಾಲಾವಕಾಶವಿದೆ. ಹೀಗಾಗಿ ಪೊಲೀಸರು ಈ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಒದಗಿಸಿದ್ದಾರೆ.
ಗ್ರಾಪಂ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಶ್ರೀ ಪ್ರಣವಾನಂದ ಸ್ವಾಮೀಜಿ! ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ

ಚಾಕು ಹಾಕಿದವರಿಗೆ ಹಾರ ಹಾಕಿ ಸನ್ಮಾನ ಮಾಡಲು ಸಾಧ್ಯವಿಲ್ಲ: ವಿಜಯೇಂದ್ರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − fifteen =
Remember me
