ಬೆಂಗಳೂರು:ಖಾಸಗಿ ಸ್ಕೂಲ್​ ಬಸ್​ ಮತ್ತು ಬೈಕ್​ ನಡುವೆ ನಗರದ ಬನಶಂಕರಿಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, 16 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಹಾರೋಹಳ್ಳಿಯ ಕೀರ್ತನ ಮೃತ ದುರ್ದೈವಿ. ಇತ್ತೀಚಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದ ಕೀರ್ತನ ಮತ್ತು ಹರ್ಷಿತಾ ಇಬ್ಬರೂ ಕನಕಪುರ ರಸ್ತೆಯ ನೆಟ್ಟಿಗೆರೆ ಬಳಿಯ ಅಕ್ಕನ ಮನೆಗೆ ಬುಧವಾರ ತೆರಳಿದ್ದರು. ಗುರುವಾರ ಬೆಳಗ್ಗೆ ನಾಗರಬಾವಿಯ ಸರ್ಕಾರಿ ಕಾಲೇಜಿಗೆ ಸೇರಲೆಂದು ಸ್ನೇಹಿತ ದರ್ಶನ್​ನ ಬೈಕ್​ನಲ್ಲಿ ತ್ರಿಬಲ್​ ರೈಡಿಂಗ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬನಶಂಕರಿಯ ಕಿತ್ತೂರು ರಾಣಿ ಚೆನ್ನಮ್ಮ ಫ್ಲೈ ಓವರ್ ಬಳಿ ವೇಗವಾಗಿ ಬಂದ ಡೆಲ್ಲಿ ಪಬ್ಲಿಕ್ ಶಾಲೆಯ ವ್ಯಾನ್ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಹರ್ಷಿತಾ ಮತ್ತು ದರ್ಶನ್ ಗಾಯಗೊಂಡಿದ್ದಾರೆ. ಶಾಲಾ ವಾಹನ ಚಾಲಕ ಪರಾರಿಯಾಗಿದ್ದಾನೆ. ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಊಟ ಇಲ್ಲ ಎಂದಿದ್ದಕ್ಕೆ ಸಿಬ್ಬಂದಿಯನ್ನು ಕೂಡಿಹಾಕಿ ಡಾಬಾಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು! ಕೊಪ್ಪಳದಲ್ಲಿ ಅಮಾನವೀಯ ಕೃತ್ಯ

ಡಿಕೆಶಿಗೆ ಮತ್ತೆ ಎದುರಾಯ್ತು ಸಂಕಷ್ಟ! ಚಾರ್ಜ್​ಶೀಟ್​ ಸಲ್ಲಿಸಿದ ಇಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
