ಹಾಸನ:ಜಿಲ್ಲೆಯ ಹಿರಿಯ ವಕೀಲ, ಕಾಂಗ್ರೆಸ್ ಮುಖಂಡ, ಮಾಜಿ ವಿಧಾನಪರಿಷತ್ ಸದಸ್ಯ ಎಸ್.ಎಂ.ಆನಂದ್(75) ಭಾನುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾದರು.
ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ಬಾರಿ (2004-2010)ವಿಧಾನ ಪರಿಷತ್ ಸದಸ್ಯರಾಗಿದ್ದ ಇವರು, 1996ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಒಂದು ಅವಧಿಗೆ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಸ್​.ಎಂ.ಆನಂದ್​ ಅವರು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾಗಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ಸಂಘಟನೆಗೆ 4 ದಶಕಗಳಿಂದ ತೊಡಗಿಸಿಕೊಂಡಿದ್ದರು.
ಪಾರ್ಥೀವ ಶರೀರವನ್ನು ನಗರದ ಇವರ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಇವರಿಗೆ ಪತ್ನಿ ಇದ್ದಾರೆ. ಸಂಜೆ ಬಿಟ್ಟಗೌಡನಹಳ್ಳಿ ಶಾಂತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.
2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ನಂದಿಬೆಟ್ಟದ ತಪ್ಪಲಲ್ಲಿ ಇದೆಂಥಾ ವರ್ತನೆ? ಹೇಳೋರಿಲ್ಲ ಕೇಳೋರಿಲ್ಲ… ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
