ತುಮಕೂರು:ನಗರದ 30ನೇ ವಾರ್ಡ್​ನ ಗಾರೆನರಸಯ್ಯನ ಕಟ್ಟೆಯಲ್ಲಿ ಶನಿವಾರ ನೂರಾರು ಜನರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯುತ್ತಿರುವಾಗಲೇ ಶಾಮಿಯಾನ ಕುಸಿದಿದ್ದು, ಕಾರ್ಪೋರೇಟರ್ ವಿಷ್ಣುವರ್ಧನ್ ಸೇರಿ ಐವರು ಗಾಯಗೊಂಡಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಪುತ್ರಿ ಶ್ರದ್ಧಾ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮೇಯರ್ ಬಿ.ಜಿ.ಕೃಷ್ಣಪ್ಪ ಸೇರಿದಂತೆ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.
ಗಾರೆನರಸಯ್ಯನ ಕಟ್ಟೆ(ಕೆರೆ)ಯನ್ನು ಧರ್ಮಸ್ಥಳ ಗ್ರಾಮೀಣಾಭೀವೃದ್ಧಿ ಸಂಘದಿಂದ ಅಭಿವೃದ್ಧಿ ಪಡಿಸಲಾಗಿತ್ತು. ಈ ಕೆರೆಯನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಹಿನ್ನೆಲೆ ಇಂದು ಕಾರ್ಯಕ್ರಮ ಆಯೋಜಿಸಲಾಗಿತ್ತು.‌

ವೇದಿಕೆಯಲ್ಲಿ ವೀರೇಂದ್ರ ಹೆಗ್ಗಡೆ ಅವರ ಪುತ್ರಿ ಶ್ರದ್ಧಾ, ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿಗಣೇಶ್, ಮೇಯರ್ ಕೃಷ್ಣಪ್ಪ, ಸ್ಥಳೀಯ ಕಾರ್ಪೋರೇಟರ್ ವಿಷ್ಣುವರ್ಧನ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. ವೇದಿಕೆ ಮುಂಭಾಗ ನೂರಾರು ಜನ ಆಸೀನರಾಗಿದ್ದರು. ಈ ವೇಳೆ ರಭಸವಾಗಿ ಬೀಸಿದ ಬಿರುಗಾಳಿಗೆ ಶಾಮಿಯಾನ ಕುಸಿದಿದೆ. ಭಯದಿಂದ ಜನ ದಿಕ್ಕಾಪಾಲಾಗಿ ಓಡಿದ್ದಾರೆ.
ಹೊಸಪೇಟೆಯಲ್ಲಿ ಚಲಿಸುವ ರೈಲಿಂದ ಬಿದ್ದು ಅಪರಿಚಿತ ಯುವಕ-ಯುವತಿ ಸಾವು

ನಿಮ್ಮ ಪ್ರೀತಿ-ವಿಶ್ವಾಸಕ್ಕೆ ನಾನು ಕರಗಿ ಹೋದೆ… ಅರಳಿಕಟ್ಟೆ ಮೇಲೆ ಕೂತು ಗ್ರಾಮಸ್ಥರ ಸಮಸ್ಯೆ ಆಲಿಸುತ್ತಾ ಭಾವುಕರಾದ ಸಿಎಂ

6 ವರ್ಷದ ಹಿಂದೆ ಸಂತೆಯಲ್ಲಿ ಬೇರ್ಪಟ್ಟಿದ್ದ ತಾಯಿ-ಮಗನನ್ನು ಒಂದುಗೂಡಿಸಿದ ಆಧಾರ್ ಕಾರ್ಡ್​! ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಯಲಹಂಕ ಪೊಲೀಸರು

Sign in to your account
Please enter an answer in digits:five × five =
Remember me
