ಶಿವಮೊಗ್ಗ:ನಿನ್ನೆ ಶಿವಮೊಗ್ಗ ಆಯ್ತು, ಇಂದು ಭದ್ರಾವತಿಯಲ್ಲೂ ಯುವಕನೊಬ್ಬನ ಮೇಲೆ ಹಲ್ಲೆ ನಡೆದಿದ್ದು, ಚಾಕು ಇರಿತಕ್ಕೆ ಯತ್ನ ಮಾಡಲಾಗಿದೆ ಎಂಬ ಮಾಹಿತಿ ಲಬ್ಯವಾಗಿದೆ.27 ವರ್ಷದ ಸುನೀಲ್​ ಎಂಬಾತನ ಮೇಲೆ ಮಂಗಳವಾರ ಬೆಳಗ್ಗೆ ಭದ್ರಾವತಿಯಲ್ಲಿ ಅನ್ಯಕೋಮಿನ ಯುವಕರು ಏಕಾಏಕಿ ಹಲ್ಲೆ ಮಾಡಿದ್ದಾರೆ.
ಪ್ರೇಮ್​ಸಿಂಗ್​ ಮೇಲೆ ಚಾಕು ಇರಿತ ನಡೆದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗಕ್ಕೆ ಆರ್​ಎಪಿ ತುಕಡಿ ಆಗಮಿಸಿದ್ದು, ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ಬಂದೋಬಸ್ತ್​ ಮಾಡಲಾಗಿದೆ. ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರುವ ಕೆಲಸ ಆಗ್ತಿದೆ. ಇದರ ನಡುವೆ ಭದ್ರಾವತಿಯಲ್ಲಿ ಸುನೀಲ್ ಎಂಬಾತನ ಮೇಲೆ ಹಲ್ಲೆ ನಡೆದಿದೆ.
ಎಂದಿನಂತೆ ನೆಹರು ನಗರದ ಸುನೀಲ್​ ಇಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಆಗ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದು, ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ. ಸುನೀಲ್​ ಭಜರಂಗದಳದ ಕಾರ್ಯಕರ್ತ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಸುನೀಲ್​ನನ್ನು ಭದ್ರಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಬಾರಕ್ ಅಲಿಯಾಸ್ ಡಿಚ್ಚಿ (26) ಹಲ್ಲೆ ಮಾಡಿದ್ದಾನೆ. ಸುನೀಲ್ ಕೆಲಸಕ್ಕೆ ಮನೆ ಮುಂದಿನ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಅಡ್ಡಗಟ್ಟಿದ ಮುಬಾರಕ್ ಎಡಗೈ, ಭುಜ ಮತ್ತು ತಲೆಗೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಭದ್ರಾವತಿ ಹಳೇನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಕು ಹಾಕಿದವರಿಗೆ ಹಾರ ಹಾಕಿ ಸನ್ಮಾನ ಮಾಡಲು ಸಾಧ್ಯವಿಲ್ಲ: ವಿಜಯೇಂದ್ರ

ಶಿವಮೊಗ್ಗದಲ್ಲಿ ಬಂದೋಬಸ್ತ್​ ಮಾಡಲಾಗಿದೆ, ಜನರು ಭಯಪಡುವ ಅವಶ್ಯಕತೆಯಿಲ್ಲ: ಎಡಿಜಿಪಿ ಅಲೋಕ್​ ಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 11 =
Remember me
