ಬೆಂಗಳೂರು:ಶಿವಮೊಗ್ಗ ನಗರದಲ್ಲಿ ಸಮಾಜಘಾತುಕ ಶಕ್ತಿಗಳ ಬೆಳವಣಿಗೆಯಲ್ಲಿ ಪೊಲೀಸರ ಪಾತ್ರವಿದೆ‌ ಎಂದು ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ‌ ಬಗ್ಗೆ ತನಿಖೆ ನಡೆಸಿ‌ ವಾರದೊಳಗೆ ವರದಿ ಸಲ್ಲಿಸಬೇಕೆಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು, ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಕುರಿತಂತೆ ಇದುವರೆಗೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳನ್ನು ಮಾಡಿದ್ದು, ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿವೆ. ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ಶಿವಮೊಗ್ಗ ಜಿಲ್ಲೆಯ ದೊಡ್ಡಪೇಟೆ ಹಾಗೂ ಕೋಟೆ ಠಾಣೆಗಳಲ್ಲಿ ಹಲವಾರು ತೀವ್ರತರಹದ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿಯಿದೆ.
ಕ್ರಿಮಿನಲ್ ಹಿನ್ನೆಲೆಯುಳ್ಳ ಆರೋಪಿಗಳ ವಿರುದ್ಧ ಕಳೆದ ಐದು ವರ್ಷಗಳಲ್ಲಿ ಎರಡೂ ಠಾಣೆಗಳಲ್ಲಿ ಕರ್ತವ್ಯನಿರ್ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೈಗೊಂಡ ಕ್ರಮಗಳೇನು? ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯದ ಲೋಪಗಳು ಹಾಗೂ ಮೇಲಧಿಕಾರಿಗಳು ನೀಡಿದ ನಿರ್ದೇಶನ ಪಾಲನೆಯಾಗಿದ್ದರ ಬಗ್ಗೆಯೂ ತನಿಖೆ ನಡೆಸಿ ವಾರದೊಳಗೆ ವರದಿ ಸಲ್ಲಿಸಬೇಕು ಎಂದು ಡಿಜಿಪಿಗೆ‌ ಆರಗ‌ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ.
‘ಶಿವಮೊಗ್ಗದ ಹರ್ಷ ಮೇಲೆ ಕೊತ್ತಂಬರಿ ಸೊಪ್ಪು ತರಲು ಹೋದ… ಹುಡುಗಿ ಜತೆ ಹೋದ… ಕೇಸ್ ಇಲ್ಲ’

https://www.vijayavani.net/a-radio-jocky-rj-rachana-is-no-more/
ಕಳ್ಳತನಕ್ಕೆ ಬಂದು ಮಾಡಿದ್ದೇ ಬೇರೆ, ಇಡೀರಾತ್ರಿ ಮಳವಳ್ಳಿಯ ಅಂಗನವಾಡಿಯಲ್ಲೇ ಇದ್ದು ಸುಳಿವೊಂದನ್ನು ಬಿಟ್ಟು ಹೋದ…

ತಗೊಂಡಿದ್ದು 10 ಸಾವಿರ, ಕಟ್ಟಿದ್ದು 7 ಲಕ್ಷ ರೂ.! ಆನ್​ಲೈನ್​ ಆ್ಯಪ್​ನಲ್ಲಿ ಸಾಲ ಪಡೆದವನಿಗೆ ಬಂದ ಕಷ್ಟ ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
