ಶಿವಮೊಗ್ಗ:ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣದ ತನಿಖೆ ಜವಾಬ್ದಾರಿಯನ್ನು ಎನ್​ಐಎಗೆ ವಹಿಸಲಾಗಿದೆ.
ಹರ್ಷ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಯುಎಪಿಎ ಪ್ರಕರಣ ದಾಖಲಾಗಿತ್ತು. ಹೀಗಾಗಿ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ಸರ್ಕಾರ ವಹಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಈಗಾಗಲೇ ಎಫ್​ಐಆರ್ ದಾಖಲಿಸಿಕೊಂಡಿದೆ ಎನ್ನಲಾಗುತ್ತಿದೆ.
ಹರ್ಷನ ಹತ್ಯೆ ಪ್ರಕರಣದ ಹಿಂದೆ ಕೆಲ ಸಂಘಟನೆಗಳು ಇರುವ ಅನುಮಾನ ಇದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಹಲವು ಸಂಘ-ಸಂಸ್ಥೆಗಳು ಸರ್ಕಾರವನ್ನು ಒತ್ತಾಯಿಸಿದ್ದವು. ಕೇಂದ್ರ‌ದ ಗೃಹ ಸಚಿವ ಅಮಿತ್ ಷಾ ಅವರಿಗೂ ಪತ್ರ ಬರೆದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಹರ್ಷನ ಹತ್ಯೆ ಪ್ರಕರಣವನ್ನು ಎನ್​ಐಎಗೆ ವಹಿಸುವಂತೆ ಕೋರಿದ್ದರು. ಶೋಭಾ ಕರಂದ್ಲಾಜೆ ಅವರ ಪತ್ರಕ್ಕೆ ಅಮಿತ್ ಷಾ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಜತೆಗೆ ಹಿಂದು ಮುಖಂಡ ಗಿರೀಶ್ ಭಾರದ್ವಾಜ್ ಎಂಬುವರು ಕೂಡ ಎನ್​ಐಎ ಡೈರೆಕ್ಟರ್ ಜನರಲ್​ಗೆ ಪತ್ರ ಬರೆದು ಪ್ರಕರಣದ ತನಿಖೆಯನ್ನು ಎನ್​ಐಎ ನಿಂದಲೇ ನಡೆಸುವಂತೆ ಕೋರಿದ್ದರು.
ಮೂರು ಮದ್ವೆ ಆದ್ರೂ ಮುಗಿಯದ ಚೆಲ್ಲಾಟ! 3ನೇ ಗಂಡನಿಗೆ ಪ್ರಾಣಸಂಕಟ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಒಂದೇ ಬೈಕ್​ನಲ್ಲಿ ಬರುತ್ತಿದ್ದ ಇಬ್ಬರು ಮಕ್ಕಳು, ದಂಪತಿ ಸ್ಥಳದಲ್ಲೇ ದುರ್ಮರಣ

ಆಸ್ತಿ ಬರೆಸಿಕೊಂಡು ತಂದೆ-ತಾಯಿಯನ್ನ ಬೀದಿಗೆ ತಳ್ಳಿದ್ದ ಮಕ್ಕಳಿಗೆ ತಕ್ಕ ಪಾಠ ಕಲಿಸಿದ ಕಂದಾಯ ಇಲಾಖೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
