ತೀರ್ಥಹಳ್ಳಿ:ಆಸ್ಪತ್ರೆಯಿಂದ ಮನೆಗೆ ತೆರಳುವ ವೇಳೆ ಪತಿಯ ಎದುರೇ ಮಹಿಳೆಯನ್ನ ಬೆತ್ತಲೆಗೊಳಿಸಿ ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿ ಬರುವ ತೀರ್ಥಹಳ್ಳಿ ತಾಲೂಕಿನ ಆರಗ ಬಳಿ ನಡೆದಿದೆ. ಎರಡು ದಿನಗಳ ಹಿಂದೆ ಈ ದುರ್ಘಟನೆ ಸಂಭವಿಸಿದ್ದು, ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದ್ದು, ದಲಿತ ಸಂಘಟನೆ ಪಟ್ಟು ಹಿಡಿದ ನಂತರ ಎಫ್‌ಐಆರ್ ದಾಖಲಾಗಿದೆ.
ಅನಾರೋಗ್ಯದ ಕಾರಣ ಪತ್ನಿಗೆ ಚಿಕಿತ್ಸೆ ಕೊಡಿಸಲು ಸೋಮವಾರ ಸಂಜೆ ಆಸ್ಪತ್ರೆಗೆಂದು ಪತ್ನಿಯನ್ನು ತೀರ್ಥಹಳ್ಳಿಗೆ ಕರೆದುಕೊಂಡು ಗಂಡ ಬಂದಿದ್ದ. ವೈದ್ಯರಿಗೆ ತೋರಿಸಿದ ಬಳಿಕ ರಾತ್ರಿ 9 ಗಂಟೆ ಸುಮಾರಿಗೆ ಬಸ್ಸಿನಲ್ಲಿ ಆರಗ ಗೇಟಿನಲ್ಲಿ ಇಳಿದುಕೊಂಡ ದಂಪತಿ, ಹೋಟೆಲ್​ನಲ್ಲಿ ಊಟ ಪಾರ್ಸೆಲ್​ ತೆಗೆದುಕೊಂಡು ಸುಮಾರು ಎರಡು ಕಿಮೀ ದೂರದಲ್ಲಿರುವ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಆರಗ ಗೇಟ್ ಮತ್ತು ಆರಗ ಪೇಟೆಯ ನಡುವಿನ ನಿರ್ಜನ ಪ್ರದೇಶದಲ್ಲಿ ದಂಪತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಗಂಡನ ಮೇಲೆ ಹಲ್ಲೆ ನಡೆಸಿದ್ದಾರೆ. ಆತ ಪ್ರಜ್ಞಾಹೀನನಾಗಿ ಬಿದ್ದಿದ್ದು, ಆರೋಪಿಗಳು ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮಹಿಳೆ ಬೊಬ್ಬೆ ಹಾಕಿದ್ದನ್ನು ಕೇಳಿಸಿಕೊಂಡ ಘಟನಾ ಸ್ಥಳಕ್ಕೆ ಸಮೀಪದಲ್ಲಿದ್ದ ಇಬ್ಬರು ಸಹೋದರರು ಅಲ್ಲಿಗೆ ಬರುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಈ ದಂಪತಿಯನ್ನು ಆಟೋ ರಿಕ್ಷಾದಲ್ಲಿ ಅವರ ಮನೆಗೆ ಕಳುಹಿಸಲಾಗಿದೆ. ಸಂತ್ರಸ್ತ ಮಹಿಳೆಗೆ ಕಿವಿ ಕೂಡ ಕೇಳಿಸುವುದಿಲ್ಲ ಎಂದೂ ಅವರ ಪರಿಚಯಸ್ಥರು ತಿಳಿಸಿದ್ದಾರೆ.
ಊಟ ಚೆಲ್ಲಾಪಿಲ್ಲಿ:ಊರು ತಲುಪುವುದು ರಾತ್ರಿ 10 ಗಂಟೆಯಾಗಲಿದೆ ಎಂಬ ಕಾರಣಕ್ಕೆ ಹೋಟೆಲ್‌ನಲ್ಲೇ ದಂಪತಿ ಊಟ ಕಟ್ಟಿಸಿಕೊಂಡು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ದುಷ್ಕರ್ಮಿಗಳು ಊಟದ ಪಾರ್ಸಲ್ ಕಿತ್ತೆಸೆದು, ಗಂಡನಿಗೆ ಪ್ರಜ್ಞಾಹೀನನಾಗುವಂತೆ ಹಲ್ಲೆ ಮಾಡಿ ಬಳಿಕ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಸಮೀಪದಲ್ಲೇ ಇದ್ದ ಸಹೋದರರು ತಕ್ಷಣ ಅಲ್ಲಿಗೆ ಬಂದಿದ್ದರಿಂದ ಆರೋಪಿಗಳು ಪರಾರಿಯಾಗಿದ್ದಾರೆ.
ಆರೋಪಿಗಳು ಯಾರು?:ತೀರ್ಥಹಳ್ಳಿ ತಾಲೂಕಿನ ದೇವರಗುಡಿ ಗ್ರಾಮದ ಸಂಪತ್, ಆದರ್ಶ ಹಾಗೂ ಇತರ ಇಬ್ಬರು ಸೇರಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ಗೊತ್ತಾಗಿದೆ. ಘಟನೆ ಸೋಮವಾರ ರಾತ್ರಿ ನಡೆದಿದ್ದು, ಬುಧವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆದಿದೆ.
ತಡರಾತ್ರಿ ಬೈಕ್​ನಲ್ಲಿ ಮಹಿಳೆ ಶವ ಸಾಗಿಸುವಾಗ ರಾಮನಗರ ಡಿಸಿ ಕಚೇರಿ ಎದುರೇ ಅಪಘಾತ! ಬಯಲಾಯ್ತು ಗಂಡ-ಹೆಂಡ್ತಿ ರಹಸ್ಯ

PSI ಹುದ್ದೆಗೆ ಆಯ್ಕೆಯಾಗಿದ್ದ ತಮ್ಮನ ಬಂಧನ ಬೆನ್ನಲ್ಲೇ ಅಣ್ಣ ಆತ್ಮಹತ್ಯೆ! ಸಾವಿನ ಸುತ್ತ ಅನುಮಾನದ ಹುತ್ತ

ದಾಖಲೆ ಬರೆದ ಕೆಂಪಡಕೆ ಬೆಲೆ! ಅಡಕೆ ಬೆಳೆಗಾರರ ಮೊಗದಲ್ಲಿ ಸಂತಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − nine =
Remember me
