ಬಾಳೆಹೊನ್ನೂರು:ಕೋಲಾರ ಜಿಲ್ಲೆಯಲ್ಲಿ ಮದವೆ ಆರತಕ್ಷತೆ ವೇಳೆ ಕುಸಿದುಬಿದ್ದ ಮದುಮಗಳು ಚೈತ್ರಾ ಬಾರದಲೋಕಕ್ಕೆ ಹೋದ ಘಟನೆ ಇನ್ನೂ ಹಸಿಯಾಗೆ ಇದೆ. ಮಗಳನ್ನು ಕಳೆದುಕೊಂಡ ನೋವಿನಲ್ಲೂ ಆಕೆಯ ಅಂಗಾಗ ದಾನ ಮಾಡಿ ಕುಟುಂಬಸ್ಥರು ಮಾನವೀಯತೆ ಮೆರೆದರು. ಇಂತಹದ್ದೇ ಮತ್ತೊಂದು ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ಆಸ್ಪತ್ರೆಯಲ್ಲಿ ಕುಸಿದು ಬಿದ್ದ 22 ವರ್ಷದ ಕರ್ತವ್ಯನಿರತ ನರ್ಸ್​ ಗಾನವಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಎನ್​.ಆರ್​.ಪುರ ತಾಲೂಕು ಕಟ್ಟಿನಮನೆ-ಹೊಸಕೊಪ್ಪದ ಕೃಷ್ಣಮೂರ್ತಿ ಮತ್ತು ಲೀಲಾವತಿ ದಂಪತಿ ಪುತ್ರಿ ಗಾನವಿ ಗೌಡ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್​ ಆಗಿದ್ದರು. ಫೆ.8ರಂದು ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಸ್ಪತ್ರೆಯಲ್ಲೇ ಕುಸಿದುಬಿದ್ದ ಗಾನವಿ ಮೇಲೆ ಏಳಲೇ ಇಲ್ಲ. ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ಪೆಟ್ಟಾಗಿತ್ತು, ಮಿದುಳಿನ ಶಸ್ತ್ರಚಿಕಿತ್ಸೆ ನಡೆಸಿದರೂ ಯಶಸ್ವಿಯಾಗಿರಲಿಲ್ಲ. ಮಿದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಎಲ್ಲವೂ ಅಂದುಕೊಂಡತೆ ಇದ್ದಿದ್ದರೆ ಗಾನವಿ ಸಹೋದರಿಯ ವಿವಾಹ ಫೆ.20ರಂದು ನಡೆಯಬೇಕಿತ್ತು.

ಮಗಳು ಇನ್ನು ಮರಳಿ ಬರುವುದಿಲ್ಲ ಎಂದು ಅರಿಯ ಗಾನವಿ ಪಾಲಕರು, ಮಗಳ ಅಂಗಾಂಗ ದಾನಕ್ಕೆ ನಿರ್ಧರಿಸಿದರು. ಅದರಂತೆ, ಗಾನವಿಯ ಹೃದಯ, ಕಣ್ಣು, ಕಿಡ್ನಿ, ಲಿವರ್​ ದಾನ ಮಾಡುವ ಮೂಲಕ ಹಲವರ ಬದುಕಿಗೆ ಬೆಳಕಾದರು.
ಗಾನವಿ ಸಹೋದರಿಯ ವಿವಾಹ ಫೆ.20ರಂದು ನಡೆಯಬೇಕಿತ್ತು. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ. ಭಾನುವಾರ(ಫೆ.13) ಮಧ್ಯಾಹ್ನ ಗಾನವಿಯ ಮೃತದೇಹವನ್ನು ಹೊಸಕೊಪ್ಪಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತು. ಗಾನವಿಯ ಪಾಲಕರು ಕೂಲಿ ಕಾರ್ಮಿಕರಾಗಿದ್ದಾರೆ.
ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಗಾನವಿ ಬಲಿ?:ಗಾನವಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿ ಆಕೆಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡದೆ ನಿರ್ಲಕ್ಷ್ಯ ವಹಿಸಿದೆ ಎಂದು ಮೃತಳ ಸಂಬಂಧಿ ಸಂಸೆ ಬಸರೀಕಲ್​ನ ಮಂಜುನಾಥ್​ ದೂರಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳಿಸಿದರೂ ಯಾವ ಆಸ್ಪತ್ರೆಗೆ ಸೇರಿಸಬೇಕೆಂದು ಸರಿಯಾಗಿ ಮಾಹಿತಿ ನೀಡಿಲ್ಲ. 5-6 ಗಂಟೆ ಕುಟುಂಬದವರು ಆಸ್ಪತ್ರೆಗಾಗಿ ಅಲೆದಾಡಿದ್ದಾರೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆತಿದ್ದರೆ ಗಾನವಿ ಬದುಕುತ್ತಿದ್ದಳೋ ಏನೋ? ತುರ್ತು ಸಂದರ್ಭದಲ್ಲಿ ಸರಿಯಾಗಿ ಸ್ಪಂದಿಸದ ಶಿವಮೊಗ್ಗದ ಖಾಸಗಿ ಆಸ್ಪತ್ರೆ ವಿರುದ್ಧ ದೂರು ದಾಖಲಿಸುವುದಾಗಿ ಅವರು ತಿಳಿಸಿದ್ದಾರೆ.
ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

ಸಾವಲ್ಲೂ ಸಾರ್ಥಕತೆ ಮೆರೆದ ಚೈತ್ರಾಗಿತ್ತು ಮಹತ್ತರ ಆಸೆ, ಆಕೆ ಬದುಕಿದ್ದರೆ ಸಂಚಲನ ಸೃಷ್ಟಿಸುತ್ತಿದ್ದಳು…

ಬೆಂಗಳೂರಲ್ಲಿ ಒಣ ಕೊಂಬೆ ಬಿದ್ದು ಕೋಮಾದಲ್ಲಿದ್ದ ಬಾಲಕಿ ಸಾವು: 702 ದಿನ ಸತತ ಚಿಕಿತ್ಸೆಯ ನಂತರವೂ ಬದುಕಲಿಲ್ಲ…

ಪೊಲೀಸರಿಂದಲೇ ಆಟೋ ತಳ್ಳಿಸಿದ ಭೂಪ! ಆಟೋ ಸ್ಟಾರ್ಟ್​ ಮಾಡಲ್ಲ… ಎಂದು ರೋಡಲ್ಲೇ ಚಾಲಕ ಕಿರಿಕ್​

ಪ್ರೇಮ ವಿವಾಹವಾದ್ರೂ ಮತ್ತೊಬ್ಬನ ಮೇಲೆ ಮೋಹ: ಪುರುಷನ ಚಪ್ಪಲಿ, ಪ್ರಸಾದದ ಬ್ಯಾಗು ಬಿಚ್ಚಿಟ್ಟ ಭಯಾನಕ ರಹಸ್ಯವಿದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + fifteen =
Remember me
