ತುಮಕೂರು:ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ‘ಭಾರತ ರತ್ನ’ ಕೊಡಬೇಕು ಎಂಬ ಕೂಗು ದಟ್ಟವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ, ಪೂಜ್ಯರಿಗೆ ಭಾರತ ರತ್ನ ಕೊಡಬೇಕು ಎಂದು ಯಾರೂ ಕೇಳಬಾರದು. ಅದನ್ನ ಕೇಳಿ ಪಡೆಯುವ ಪ್ರಶ್ನೆ ಇಲ್ಲ. ಅದಾಗೇ ಬಂದರೆ ‘ಅಮೃತಕ್ಕೆ ಸಮ, ಕೇಳಿ ಪಡೆದದ್ದು ವಿಷಕ್ಕೆ ಸಮಾನ’. ಆದ್ದರಿಂದ ಪೂಜ್ಯರಿಗೆ ಭಾರತ ರತ್ನ ಕೊಡಿ ಎಂದು ಯಾರನ್ನೂ ಕೇಳುವಂತ ಪ್ರಶ್ನೆಯೇ ಇಲ್ಲ. ಯಾರೂ ಕೇಳಲೇ ಬಾರದು, ಆ ಬಗ್ಗೆ ಚರ್ಚೆ ಮಾಡಲೇಬಾರದು ಎಂದು ಸೂಚಿಸಿದ್ದಾರೆ.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಸಿದ್ದಲಿಂಗ ಶ್ರೀಗಳು, ಏ.1 ರಂದು ಪರಮಪೂಜ್ಯರ ಜನ್ಮ ದಿನಾಚರಣೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ‌ ಯಡಿಯೂರಪ್ಪ, ಕೇಂದ್ರ ಸಚಿವರಾದ ಜೋಷಿ, ಭಗಂವತ್ ಕೂಬಾ, ರಾಜ್ಯ ಸಚಿವರಾದ ಸೋಮಣ್ಣ, ಬಿ.ಸಿ. ನಾಗೇಶ್, ಸಂಸದರು ಹಾಗೂ ಶಾಸಕರು ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 10:45ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 1 ಗಂಟೆಗೆ ವೇದಿಕೆ ಕಾರ್ಯಕ್ರಮ ಮುಗಿಯುತ್ತದೆ. ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆ ಆಗ್ತಿದೆ. ಅಮಿತ್ ಷಾ ಅವರು ಪೂಜ್ಯರ ಗದ್ದುಗೆಗೆ ಪೂಜೆ ಸಲ್ಲಿಸಿ, ವೇದಿಕೆ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ವಿವರಿಸಿದರು.
ಸಂಜೆಯ ಕಾರ್ಯಕ್ರಮಕ್ಕೆ ಖ್ಯಾಯ ಗಾಯಕರಾದ ಹಂಸಲೇಖ, ವಿಜಯ್ ಪ್ರಕಾಶ್ ನೇತೃತ್ವದಲ್ಲಿ ‘ಬಸವ ಭಾರತ ಸಂಗೀತ’ ಕಾರ್ಯಕ್ರಮ ನಡೆಯಲಿದೆ. 100 ಗಾಯಕರು, 150 ಕಲಾವಿದರು ಮೂರು ಗಂಟೆಗಳ ಕಾಲ ಒಟ್ಟಿಗೆ ಸೇರಿ ಕಾರ್ಯಕ್ರಮ ನಡೆಸಿಕೊಡುತ್ತಾರೆ. ಪೂಜ್ಯರನ್ನ ಕುರಿತು ರಚಿಸಿರುವ ಗೀತೆಗಳನ್ನ ಹಾಡುತ್ತಾರೆ. ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ. ಆದರೆ. ಪೂಜ್ಯರಿಗೆ ಭಾರತ ರತ್ನ ಕೊಡಿ ಎಂದು ಯಾರನ್ನೂ ಕೇಳಬೇಡಿ. ಅದಾಗೇ ಬಂದದ್ದು ಅಮೃತಕ್ಕೆ ಸಮಾನ, ಕೇಳಿ ಬಂದಿದ್ದು ವಿಷಕ್ಕೆ ಸಮಾನ ಎಂದು ಸಿದ್ದಲಿಂಗ ಶ್ರೀಗಳು ಮನವಿ ಮಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತ: ವಿದ್ಯಾರ್ಥಿನಿ ಸಾವು

SSLC ಪರೀಕ್ಷಾ ಕೇಂದ್ರದಲ್ಲಿ ಸಿಕ್ಕಿಬಿದ್ದ 6 ನಕಲಿ ವಿದ್ಯಾರ್ಥಿಗಳು

ಜಿಮ್​ನಲ್ಲೇ ಮಹಿಳೆ ಸಾವು: ವರ್ಕೌಟ್​ನಿಂದ ಹೃದಯಾಘಾತ? ವೈದ್ಯರು ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − one =
Remember me
