ದಾವಣಗೆರೆ:ಬಸವಣ್ಣರ ವಚನಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ. ಮೂಲ ವಿಚಾರಗಳನ್ನು ತಿದ್ದದೆ ವಾಸ್ತವ ಸಂಗತಿಗಳನ್ನು ಪಠ್ಯದಲ್ಲಿ ನೀಡಬೇಕು. ಮಕ್ಕಳಿಗೆ ನೈತಿಕ ಶಿಕ್ಷಣದ ಅಗತ್ಯವಿದೆ. ಈಗ ಉಂಟಾಗಿರುವ ವಿವಾದ ಮುಗಿದು ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಯಾಗಲಿ ಎಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಕುರಿತು ಶುಕ್ರವಾರ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿದ್ಧಗಂಗಾ ಶ್ರೀಗಳು, ಬಸವಣ್ಣ ಮಹಾನ್​ ಮಾನವತಾವಾದಿ. ಮನುಷ್ಯರ ಬದುಕಿಗೆ ಬೇಕಾದ ತತ್ವಗಳನ್ನು ನೀಡಿ ನಮಗೆ ಬೆಳಕಾಗಿದ್ದಾರೆ. ಅವರು ಕನ್ನಡಿ ಇದ್ದಂತೆ. ನಮ್ಮನ್ನು ನಾವು ಸರಿಪಡಿಸಿಕೊಳ್ಳಲು ಬೇಕಾದ ಮಾರ್ಗದರ್ಶನ ನೀಡಿದ್ದಾರೆ. ಇನ್ನೊಬ್ಬರ ಕಡೆಗೆ ಬೆರಳು ತೋರುವುದಕ್ಕಿಂತ ನಮ್ಮನ್ನು ನಾವು ತಿದ್ದಿಕೊಳ್ಳಬೇಕು ಎಂದರು.
ಬಸವಣ್ಣರು ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ನಾಡಿಗೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅವರ ವಿಚಾರಗಳು ಎಲ್ಲರಿಗೂ ಬೇಕಾಗಿದೆ. ಯಾವುದನ್ನೂ ತಿದ್ದದೆ ಮೂಲ ಸ್ವರೂಪದಲ್ಲಿ ನೀಡಬೇಕು. ಬಸವಣ್ಣರ ವಚನ ತಿದ್ದಲು ಹೋದರೆ ಅದು ಅಪಚಾರವಾಗುತ್ತದೆ. ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ತಿರುವುಗಳನ್ನು ಪಡೆಯುತ್ತಿದ್ದು, ಈ ರೀತಿ ಆಗಬಾರದು. ಮಕ್ಕಳಿಗೆ ನೈತಿಕ ಶಿಕ್ಷಣದ ಅಗತ್ಯವಿದೆ. ಪಠ್ಯಪುಸ್ತಕಗಳಲ್ಲಿ ಅದರ ಕೊರತೆ ಎದ್ದು ಕಾಣುತ್ತಿದೆ ಎಂದು ತಿಳಿಸಿದರು.
ವಿಧಾನಸೌಧದಲ್ಲಿ ಅಶ್ಲೀಲ ವಿಡಿಯೋ ನೋಡಿದವರಿಗೆ ಇಲ್ಲದ ಶಿಕ್ಷೆ, ಶಾವಿಗೆ ಒಣಹಾಕಿದ ಬಡಪಾಯಿಗೇಕೆ? ಶುರುವಾಯ್ತು ಅಭಿಯಾನ

ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ: ಸ್ಥಳದಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ-ಗೆಳತಿ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 1 =
Remember me
