ತುಮಕೂರು:ಸಿದ್ಧಗಂಗಾ ಮಠದಲ್ಲಿ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ 3ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶ್ರೀಗಳ ಗದ್ದುಗೆಯಲ್ಲಿ ಇಂದು ಪ್ರಾತಃಕಾಲದಿಂದಲೇ ರುದ್ರಾಭಿಷೇಕ, ವಿಶೇಷ ಪೂಜೆ ನೆರವೇರಿದವು.
ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಹಾಗೂ ಹರಗುರುಚರಮೂರ್ತಿಗಳು ಶಿವಕುಮಾರ ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಮಠಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀಗಳ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನವನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಬಾರಿ ಕರೊನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಶ್ರೀಗಳ ಗದ್ದುಗೆಗೆ ಪೂಜೆ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮ ಆಯೋಜಿಸಿಲ್ಲ. ಉತ್ಸವ, ಮೆರವಣಿಗೆ, ವೇದಿಕೆ ಕಾರ್ಯಕ್ರಮ ಎಲ್ಲವೂ ರದ್ದು ಪಡಿಸಲಾಗಿದೆ. ಭಕ್ತರ ದರ್ಶನಕ್ಕೆ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ವ್ಯವಸ್ಥೆ ಮಾಡಲಾಗಿದೆ. ಪ್ರಸಾದ ವ್ಯವಸ್ಥೆ ದಾಸೋಹದಲ್ಲಿರಲಿದೆ.
ಸಿದ್ಧಗಂಗಾ ಮಠಕ್ಕೆ ಸಿಎಂ ಭೇಟಿ:ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮಕ್ಕಳಿಗೆ ಊಟ ಬಡಿಸುವ ಮೂಲಕ ದಾಸೋಹ ದಿನಕ್ಕೆ ಚಾಲನೆ ನೀಡಿದರು. ಸಚಿವರಾದ ಬಿ.ಸಿ ನಾಗೇಶ್, ಮಾಧುಸ್ವಾಮಿ ಸಿಎಂಗೆ ಸಾಥ್​ ಕೊಟ್ಟರು. ಮಕ್ಕಳಿಗೆ ಸಿಎಂ ಪಾಯಸ, ಬೂಂದಿ, ತುಪ್ಪ ಬಡಿಸಿದರು.
2 ಆಂಬುಲೆನ್ಸ್‌ಗೆ ದಾರಿ ಬಿಡದೆ ಪುಂಡಾಟ ಮೆರೆದ ಕಾರು ಚಾಲಕ! 40 ಕಿ.ಮೀ.ವರೆಗೂ ತೊಂದರೆ ಕೊಟ್ಟ

ದೂರು ನೀಡಲು ಬಂದಾಕೆಯನ್ನೇ ಮಂಚಕ್ಕೆ ಕರೆದ ಪೊಲೀಸ್​ ಇನ್​ಸ್ಪೆಕ್ಟರ್​! ಸಂತ್ರಸ್ತೆ ಬಿಚ್ಚಿಟ್ಟ ನೋವು ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + seven =
Remember me
