ಮೈಸೂರು:ಹಿಜಾಬ್ ವಿವಾದ ಆಗಲು ಬಿಜೆಪಿಯೇ ಕಾರಣ. ಮುಸ್ಲಿಂ ಹೆಣ್ಣು ಮಕ್ಕಳು ದುಪ್ಪಟ್ಟವನ್ನ ತಲೆಗೆ ಹಾಕಿ ಕೊಳ್ಳುತ್ತೇನೆ ಅಂದ್ರೆ ಅದರಲ್ಲಿ ತಪ್ಪೇನಿದೆ? ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ? ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕುತ್ತಾರೆ. ಅದನ್ನು ನೀವು ಪ್ರಶ್ನಿಸ್ತೀರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸಿದ್ದರಾಮನ ಹುಂಡಿಯಲ್ಲಿ ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಸಿದ್ದರಾಮಯ್ಯ, ಇಂತಹ ವಿವಾದ ಸೃಷ್ಟಿಸಿ ಅರಗಿಸಿ ಕೊಳ್ಳುತ್ತೇವೆ ಎಂದು ಬಿಜೆಪಿ ಅಂದುಕೊಂಡಿದೆ. ಆದರೆ, ಜನ ಬುದ್ಧಿವಂತರು. ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ. ಸಂಘ ಪರಿವಾರದವರು ಅಲ್ಪಸಂಖ್ಯಾತರ ಕೊಲೆ ಮಾಡಿದರೆ ಮೃತರ ಕುಟುಂಬಕ್ಕೆ ಕಡಿಮೆ ಪರಿಹಾರ ಹಣ ಕೊಡುತ್ತಾರೆ. ಮುಸಲ್ಮಾನರು ಹಿಂದೂವಿ‌ನ ಕೊಲೆ ಮಾಡಿದರೆ ಮೃತರ ಕುಟುಂಬಕ್ಕೆ ಜಾಸ್ತಿ ಪರಿಹಾರ ಕೊಡುತ್ತಾರೆ. ಶಿವಮೊಗ್ಗದ ಹರ್ಷನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡ್ತಾರೆ. ಅದೇ ಕರಾವಳಿಯ ದಿನೇಶ್ ಕುಟುಂಬಕ್ಕೆ ಕೊಟ್ರಾ? ದುಡ್ಡು ಅಂದ್ರೆ ಇವರ ಅಪ್ಪನ ಮನೆಯದ್ದಾ? ಸಾರ್ವಜನಿಕರು ಬೆವರು ಸುರಿಸಿ ದುಡಿದು ಕಟ್ಟಿದ ತೆರಿಗೆ. ಇವರು ಯಾವಾಗಲೂ ಜನರಿಗೆ ಮಕ್ಮಲ್ ಟೋಪಿ ಹಾಕಬಹುದು ಅಂದುಕೊಂಡಿದ್ದಾರೆ. ಜನರಿಗೆ ಸತ್ಯ ಗೊತ್ತಾಗುತ್ತದೆ. ಇಂತಹ ವರ್ತನೆಯಿಂದ ಮತ ಕ್ರೂಢೀಕರಣ ಆಗುತ್ತೆ ಎಂಬ ಬಿಜೆಪಿ ಲೆಕ್ಕ ಉಲ್ಟಾ ಆಗುತ್ತೆ ನೋಡಿ ಎಂದರು.
CM ಬೊಮ್ಮಾಯಿಗೆ ಕೆಟ್ಟ ಶಬ್ಧಗಳಿಂದ ನಿಂದಿಸಿ ವಿಡಿಯೋ ಹರಿಬಿಟ್ಟ ವ್ಯಕ್ತಿ: ಮತಾಂಧತೆ ಬಗ್ಗೆ ಉದ್ರೇಕದ ಮಾತು

ನಾನು ಸತ್ತ ನಂತ್ರ ಬೇರೆ ಮದ್ವೆ ಆಗಿ ಆಕೆಗೂ ಕಾಟ ಕೊಡ್ಬೇಡ… ಡೆತ್​ನೋಟ್ ಬರೆದು ಬೆಂಗ್ಳೂರಲ್ಲಿ ಪತ್ರಕರ್ತೆ ಆತ್ಮಹತ್ಯೆ

ಮೂರು ಮದ್ವೆ ಆದ್ರೂ ಮುಗಿಯದ ಚೆಲ್ಲಾಟ! 3ನೇ ಗಂಡನಿಗೆ ಪ್ರಾಣಸಂಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
