ಬೆಂಗಳೂರು:ಶಾಲಾ- ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್​ ಧರಿಸಬಾರದು ಎಂಬ ನಿಯಮವೇ ಇಲ್ಲ. ಈಗ ಕೆಲ ಕಾಲೇಜುಗಳಲ್ಲಿ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶಿಸದಂತೆ ತಡೆಯಲಾಗಿದೆ. ಇದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ಎಲ್ಲೂ ಸರ್ಕಾರ ಹೇಳಿಲ್ಲ. ಕುಂದಾಪುರದ ಸರ್ಕಾರಿ ಕಾಲೇಜೊಂದರ ಪ್ರಾಂಶುಪಾಲರು ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಕಾಲೇಜು ಗೇಟ್ ಹಾಕಿ ಪ್ರವೇಶ ನಿರಾಕರಿಸಿರುವುದು ವ್ಯಕ್ತಿಯೊಬ್ಬನ ಮೂಲಭೂತ ಹಕ್ಕಿನ ಉಲ್ಲಂಘನೆ. ಹಿಜಾಬ್ ಧರಿಸುವುದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರಿಂದ ಇತರರಿಗೇನು ತೊಂದರೆ? ಮುಸ್ಲಿಂ ಹೆಣ್ಣು ಮಕ್ಕಳನ್ನು ವಿದ್ಯೆಯಿಂದ ವಂಚಿತಗೊಳಿಸುವ ಕುಟಿಲ ಪ್ರಯತ್ನ ಇದು ಎಂದು ದೂರಿದರು.
ಕಾಲೇಜಿನ‌ ಪ್ರಾಂಶುಪಾಲರು ಗೇಟ್​ನಲ್ಲಿ ಮಕ್ಕಳನ್ನು ತಡೆಯುವುದು ಅಮಾನವೀಯ. ಸಮವಸ್ತ್ರ ಕಡ್ಡಾಯ ಮಾಡಿ ಎಂದು ಹೇಳಲು ರಘುಪತಿ ಭಟ್ ಯಾರು? ಸರ್ಕಾರ ಇಂಥದಕ್ಕೆ ಕುಮ್ಮಕ್ಕು ಕೊಡಬಾರದು. ಪ್ರಾಂಶುಪಾಲರನ್ನು ವಜಾ ಮಾಡಬೇಕು. ಇದು ಮಾನವೀಯತೆ ಅಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರದಬ್ಬಿದ ಕಾಲೇಜು ಆಡಳಿತ ಮಂಡಳಿ

ಹಿಜಾಬ್​ ಬೇಕು ಅಂದ್ರೆ ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿ: ಪ್ರಮೋದ್ ಮುತಾಲಿಕ್​ ಆಕ್ರೋಶ

ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 11 =
Remember me
