ಚಿತ್ರದುರ್ಗ:ಬಸವ ಜಯಂತಿ ದಿವಸದಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೊಗಳಿದರು.
ರಾಜ್ಯ ಕಂಡ ದುರಂತ ಸಿಎಂ ಅಂದ್ರೆ ಸಿದ್ದರಾಮಯ್ಯ ಎಂದು ಗುರುವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಟೀಕಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಸಿದ್ದರಾಮಯ್ಯ ಕುರಿತು ತಾವು ನೀಡಿದ ಹೇಳಿಕೆ ಬಗ್ಗೆ ಬಹಿರಂಗವಾಗಿ ಚರ್ಚಿಸಲು ಸಿದ್ಧನಿದ್ದೇನೆ ಬನ್ನಿ ಎಂದು ಸವಾಲೆಸೆದರು.
ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಮಾತು ಕೊಟ್ಟಂತೆ ನಡೆದು ಕೊಂಡಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಭರವಸೆಗಳ ಪೈಕಿ ಶೇ.95 ಅನ್ನು ಈಡೇರಿಸಿದ್ದಾರೆ ಎಂದು ಸಿದ್ದರಾಮಯ್ಯರ ಆಡಳಿತವನ್ನು ಡಿಕೆಶಿ ಪ್ರಶಂಸಿದರು.
ಚುನಾವಣೆಗೆ ಇನ್ನು ಎರಡು ವರ್ಷ ಇರುವಾಗಲೇ ಕಾಂಗ್ರೆಸ್ಸಿನಲ್ಲಿ ಮ್ಯೂಸಿಕಲ್ ಚೇರ್ ಆಟ ಆರಂಭವಾಗಿದೆ ಎಂದಾದರೆ, ತಮ್ಮ ಪಕ್ಷದಲ್ಲಿ ಈಗ ನಡೆಯುತ್ತಿರುವುದನ್ನು ಏನೆಂದು ಕರೆಯಬೇಕು? ಎಂದು ನಳೀನ್​ ಕುಮಾರ್​ ಕಟೀಲ್​ರನ್ನು ಡಿಕೆಶಿ ಪ್ರಶ್ನಿಸಿದರು.
ಕೋವಿಡ್‌ನಿಂದ ಉದ್ಯೋಗ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿರುವ ರಾಜ್ಯದ ಜನರ ನೋವನ್ನು ಆಲಿಸಲು ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಇದು ಕಾಂಗ್ರೆಸ್ಸಿನ ಎಲ್ಲರ ಕಾರ್ಯಕ್ರಮ, ಶಿವಕುಮಾರ್ ಒಬ್ಬನದ್ದಲ್ಲ ಎಂದು ಸ್ಪಷ್ಟಪಡಿಸಿದರು.
ಶಾಸಕರು ದೆಹಲಿಗೆ ಹೋದರೆ ತಪ್ಪೇನು?: ನಳೀನ್​ ಕುಮಾರ್​ ಕಟೀಲ್​

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಪಿಎಸ್​ಐ ಆಗಿರುವ ತಾಯಿ ವಿರುದ್ಧವೇ ಗದಗ ಎಸ್​ಪಿಗೆ ದೂರು ಕೊಟ್ಟ ಯುವತಿ!

ಕಾರಿನಲ್ಲಿ ಕೂತು ನಟ ದರ್ಶನ್ ಮಹಿಳೆಗೆ ಕಿರುಕುಳಕೊಟ್ಟರು​: ಇಂದ್ರಜಿತ್​ ಲಂಕೇಶ್​ ಗಂಭೀರ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
