ಬೆಂಗಳೂರು:ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಅವರಿಗೆ ಸ್ವಂತ ಕ್ಷೇತ್ರವಿಲ್ಲ. ಮಾಜಿ ಮುಖ್ಯಮಂತ್ರಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಾಲೆಳೆದಿದ್ದಾರೆ.
ಸುದ್ದಿಗಾರರ ಜತೆಗೆ ಶುಕ್ರವಾರ ಮಾತನಾಡಿದ ವಿಶ್ವನಾಥ್​, ಸಿದ್ದರಾಮಯ್ಯ ಶಿಷ್ಯಂದಿರು ಎಲ್ಲವನ್ನು ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಅಭ್ಯರ್ಥಿ ಎಂದು ಹೇಳಿದರೆ ಕಾಂಗ್ರೆಸ್​ಗೆ 150 ಸೀಟು ಬರುತ್ತವೆ ಅಂತಾನೂ ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ಸಿಎಂ ಆದಾಗಲೇ 70 ಸ್ಥಾನಗಳಿಗೆ ನಿಂತಿದ್ದೇಕೆ? ಎಂಬುದನ್ನು ಹೇಳಬೇಕು ಎಂದು ಮಾತಿನಲ್ಲೇ ತಿವಿದರು.
ಸಿದ್ದರಾಮಯ್ಯ ಅವರೇ ಸಿಎಂ ಎನ್ನೋದಕ್ಕೆ ಟೂ ಅರ್ಲಿ ಇದು. ಮುಖ್ಯಮಂತ್ರಿ ಸ್ಥಾನ ಪತ್ರಾವಳಿ ಅಲ್ಲ, ಉಂಡು ಬಿಸಾಡೋದಲ್ಲ. ಅದನ್ನು ಸ್ವಚ್ಛವಾಗಿಟ್ಟು ಮುಂದೆ ಬರುವವರಿಗೆ ಅವಕಾಶ ಕೊಡಬೇಕು. ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಹೋದ ಸಿದ್ದರಾಮಯ್ಯ ಅವರಿಗೆ ಒಂದು ಬಾರಿ ಅವಕಾಶ ಕೊಟ್ಟಾಗಿದೆ. ಅದೇ ಪಕ್ಷದಲ್ಲಿ ಇರುವ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗಬೇಕು. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ.ಪರಮೇಶ್ವರ್ ಇದ್ದಾರೆ. ಅನಗತ್ಯ ಗೊಂದಲ ಸೃಷ್ಟಿಸಿ ಜಮೀರ್ ಅವರನ್ನು ಮುಂದಿಟ್ಟುಕೊಂಡು ಹೋಗಬೇಡಿ ಸಿದ್ದರಾಮಯ್ಯ ನವರೇ, ಒಳ್ಳೆಯದಾಗಲ್ಲ ಎಂದು ಎಚ್.ವಿಶ್ವನಾಥ್ ಕಿಡಿಕಾರಿದರು.
ವರದಕ್ಷಿಣೆಗೆ ವೈದ್ಯೆ ಬಲಿ! ಸಾವಿಗೂ ಮುನ್ನ ಸೋದರನ ಬಳಿ ಆಕೆ ಬಿಚ್ಚಿಟ್ಟ ನೋವಿನ ಸಂದೇಶ ಇಲ್ಲಿದೆ

ಮೂತ್ರ ವಿಸರ್ಜನೆ ಮಾಡುತ್ತಲೇ ಯುವಕರಿಬ್ಬರು ದುರಂತ ಸಾವು! ದೇವರೇ ಈ ಸಾವು ನ್ಯಾಯವೇ…

ತಡರಾತ್ರಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ! ಮುದ್ದಾದ ಯುವತಿ ಬಾಳಿಗೆ ಕೊಳ್ಳಿ ಇಟ್ಟಿದ್ಯಾರು?

ಗಂಡನಿದ್ದರೂ ಪರಪುರುಷನ ಜತೆ ಮಹಿಳೆಯ ಕಾಮದಾಟ! ಬೇಡ ಬೇಡ ಎಂದವನ ಉಸಿರನ್ನೇ ನಿಲ್ಲಿಸಿದ್ಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
