ಬೆಂಗಳೂರು:ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಬಿಜೆಪಿ ವರಿಷ್ಠರ ಮನದಲ್ಲೇನಿದೆ ಎಂಬುದು ಬಹಿರಂಗವಾಗಿಲ್ಲವಾದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಬೇಕು ಎಂದು ವಿವಿಧ ಮಠಾಧೀಶರು ಆಗ್ರಹಿಸುತ್ತಿದ್ದಾರೆ. ಯಡಿಯೂರಪ್ಪ ಪರವಾಗಿ ಬೆಂಬಲದ ಮಹಾಪೂರವೇ ಹರಿದು ಬರುತ್ತಿದ್ದು, ವಿವಿಧ ಸಮುದಾಯಗಳ 500-600 ಮಠಾಧೀಶರು ಶೀಘ್ರದಲ್ಲೇ ಸಭೆ ಸೇರಿ ಮುಂದಿನ ನಡೆಯ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಇದಕ್ಕೆ ಪೂರಕ ಎಂಬಂತೆ ನಿನ್ನೆ ಮತ್ತು ಇಂದು ಹಲವು ಮಠಾಧೀಶರು ಸಿಎಂ ಅನ್ನು ಭೇಟಿ ಮಾಡಿ ಚರ್ಚಿಸಿದರು. ಇಂದು ತುಮಕೂರಿನ ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರೂ ಕಾವೇರಿ ನಿವಾಸದಲ್ಲಿ ಸಿಎಂ ಅವರನ್ನು ಭೇಟಿ ಮಾಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ್ದಾರೆ.
ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ಧಗಂಗಾ ಶ್ರೀಗಳು, ಕಳೆದ ಒಂದು ವಾರದಿಂದ ಸಿಎಂ ಬದಲಾವಣೆ ಬಗ್ಗೆ ಸುದ್ದಿ ಬರ್ತಿದೆ. ಯಡಿಯೂರಪ್ಪ ಸಮರ್ಥವಾಗಿ ಕೆಲಸ ಮಾಡ್ತಿದ್ದಾರೆ. ಶಕ್ತಿ ಮೀರಿ ಕೆಲಸ ಮಾಡುವ ಅವರನ್ನು ಏಕೆ ಬದಲಾವಣೆ ಮಾಡ್ತಾರೆ? ಅವರು ಅಧಿಕಾರಾವಧಿಯನ್ನು ಪೂರ್ಣಗೊಳಿಸಬೇಕು ಎಂದು ನಾವೆಲ್ಲರೂ ಬಂದಿದ್ದೇವೆ. ನಾವೆಲ್ಲರೂ ಇಷ್ಡೇ ಹೇಳೋದು, ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯಬೇಕು. ನಾವುಗಳ್ಯಾರು ರಾಜಕಾರಣಿಗಳ ಜತೆ ಓಡಾಡ್ತಿಲ್ಲ ಎಂದರು.

ರಾಜೀನಾಮೆ ಬಗ್ಗೆ ಯಡಿಯೂರಪ್ಪ ಏನು ಹೇಳಿಲ್ಲ. ಇವಾಗ ಸಂದಿಗ್ಧ ಪರಿಸ್ಥಿತಿ ಇದೆ, ಇಂತಹ ಸಂದರ್ಭದಲ್ಲಿ ಸಿಎಂ ಬದಲಾವಣೆ ಮಾಡೋದು ಸರಿಯಲ್ಲ. ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯಬೇಕು ಎಂಬ ಅಪೇಕ್ಷೆ ನಮದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಜಾತಿ ಇಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಆಗುವ ತೀರ್ಮಾನವೇ ಸಿಎಂ ನಿರ್ಧಾರ ಆಗೋದು ಎಂದರು.
ಸಿದ್ಧಗಂಗಾ ಶ್ರೀಗಳು ಸೇರಿದಂತೆ ರಾಜ್ಯದ ಇತರ ಪ್ರಮುಖ ಮಠಾಧೀಶರು ಸಿಎಂ ಜತೆ ಚರ್ಚಿಸಿದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:seventeen − four =
Remember me
