ದಾವಣಗೆರೆ:ನಿವೇಶನಗಳ ಸಂಬಂಧ ನಕಲಿ ದಾಖಲೆ ಸೃಷ್ಟಿಸಿದ ಆರೋಪ ಎದುರಿಸುತ್ತಿದ್ದ ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ (40) ಪೊಲೀಸರು ವಿಚಾರಣೆಗೆ ಕರೆತರುವ ಹಂತದಲ್ಲಿ ತಪ್ಪಿಸಿಕೊಳ್ಳುವ ಯತ್ನದಲ್ಲಿ ಮೇಲ್ಸೇತುವೆಯಿಂದ ಹಾರಿ ಸಾವಿಗೀಡಾಗಿದ್ದಾನೆ. ದಾವಣಗೆರೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಸುಕಿನಲ್ಲಿ ಪ್ರಕರಣ ವರದಿಯಾಗಿದೆ.
ಚನ್ನಗಿರಿ ತಾಲೂಕಿನ ಕಬ್ಬಳ ಗ್ರಾಮದ ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ, ಮೂರು ನಿವೇಶನಗಳ ನಕಲಿ ದಾಖಲೆ ಸೃಷ್ಟಿಸಿ ಕುಟುಂಬದವರ ಹೆಸರಿಗೆ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.ಈ ಸಂಬಂಧ ಗಾಂಧಿನಗರ ಪಿಎಸ್ ಐ ಪೊಲೀಸ್ ಠಾಣೆಗೆ ಆರೋಪಿಯನ್ನು ವಿಚಾರಣೆಗೆಂದು ಕರೆತರುತ್ತಿದ್ದರು. ಈ ವೇಳೆ ನಸುಕಿನ ಜಾವ 2.30ರ ವೇಳೆ  ಮೇಲ್ಸೇತುವೆಯಿಂದ ಜಿಗಿದು ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಹರೀಶ್, ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯ ಸಿಬ್ಬಂದಿ ನನ್ನ ಗಂಡನನ್ನು ಬೆಳಗಿನ ಜಾವ 1 ಗಂಟೆಗೆ ಕರೆದುಕೊಂಡು ಹೋಗಿದ್ದು, ಬೆಳಗ್ಗೆ 4.30ಕ್ಕೆ ಫೋನ್ ಮಾಡಿ ನಿಮ್ಮ ಗಂಡನಿಗೆ ಆಸ್ಪತ್ರೆಗೆ ಸೇರಿಸಿದ್ದೇವೆ ಸೀರಿಯಸ್ ಆಗಿದೆ ಎಂದು ಹೇಳಿದರು. ನನ್ನ ಗಂಡನ ಸಾವಿಗೆ ಪಿಎಸ್​ಐ ಕೃಷ್ಣಪ್ಪ, ಪಿಸಿ ದೇವರಾಜ್, ಚಾಲಕ ಇರ್ಷದ್ ಅವರೇ ನೇರ ಕಾರಣ. ಬಾಬುರಾವ್ ಎಂಬುವರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿ ಹರೀಶ್ ಪತ್ನಿ ಲತಾ ದೂರು ನೀಡಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಎಸ್ಪಿ ಕೆ.ಅರುಣ್, ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನ್ಯಾಯಾಧೀಶರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ  ನಡೆಸಲಾಗುವುದು. ಸಿಐಡಿ ತನಿಖೆಗೆ ಮೃತನ ಕುಟುಂಬ ಒತ್ತಾಯಿಸಿದ್ದು ಪರಿಶೀಲಿಸಲಾಗುವುದು. ಆರೋಪಿತ ಸಿಬ್ಬಂದಿ ವಿರುದ್ದ ಇಲಾಖಾ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸುಂದರಿಯ ಮೋಹದ ಬಲೆ: ರೆಸ್ಟೋರೆಂಟ್​ ಮಾಲೀಕನ ಭೀಕರ ಹತ್ಯೆ ಹಿಂದಿದೆ ಬೆತ್ತಲೆ ಫೋಟೋಶೂಟ್​ ಸಂಗತಿ!

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರ ಒತ್ತಾಯ: ಕಾಂಗ್ರೆಸ್​ಗೆ ಕಾಡುತ್ತಿದೆ ಗ್ಯಾರಂಟಿಗಳ ಆತಂಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − one =
Remember me
