ಬೆಂಗಳೂರು:ಮಗನ ಹುಟ್ಟುಹಬ್ಬ ಆಚರಣೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮನನೊಂದ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಗ್ಗಲಿಪುರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಕನಕಪುರ ರಸ್ತೆ ಗಿರಿಗೌಡನದೊಡ್ಡಿ ಗ್ರಾಮದ ತೇಜಸ್ವಿನಿ(35) ಮೃತ ದುರ್ದೈವಿ. ಶ್ರೀಕಂಠ ಮತ್ತು ತೇಜಸ್ವಿನಿ ದಂಪತಿಗೆ ಇಬ್ಬರು ಮಕ್ಕಳು. ಕೋಳಿ ಸಾಕಣೆ ಕೇಂದ್ರ ನಡೆಸುತ್ತಿದ್ದ ಶ್ರೀಕಂಠ, ಇತ್ತೀಚೆಗೆ ನಷ್ಟ ಅನುಭವಿಸಿ ವ್ಯವಸಾಯ ಮಾಡುತ್ತಿದ್ದರು. ಮೇ 6ರಂದು ಮಗನ 2ನೇ ವರ್ಷದ ಹುಟ್ಟುಹಬ್ಬವಿತ್ತು. ಹಣಕಾಸಿನ ತೊಂದರೆಯಿಂದ ಹುಟ್ಟುಹಬ್ಬ ಆಚರಿಸಲು ಸಾಧ್ಯವಾಗಿರಲಿಲ್ಲ.
ಮಗನ ಹುಟ್ಟುಹಬ್ಬ ಆಚರಣೆ ಮಾಡಲು ಆಗದೆ ತಂದೆ ಶ್ರೀಕಂಠ, ಕೆಲಸ ನಿಮಿತ್ತ ಮೈಸೂರಿಗೆ ಹೋಗಿ ಬರುವುದಾಗಿ ಪತ್ನಿಗೆ ಹೇಳಿ ಹೋಗಿದ್ದರು. ಮಗನ ಹುಟ್ಟುಹಬ್ಬ ಆಚರಣೆ ಮಾಡಲು ಸಾಧ್ಯವಾಗಿಲ್ಲ. ಎಂಥ ಸ್ಥಿತಿ ಬಂತು ಎಂದು ನೊಂದುಕೊಂಡ ತೇಜಸ್ವಿನಿ ನೇಣಿಗೆ ಶರಣಾಗಿದ್ದಾರೆ. ಕಗ್ಗಲಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ ತಾಯಿ-ಮಗು ಸೇರಿ ಮೂವರ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − ten =
Remember me
