ಬೆಂಗಳೂರು:ಹಾಡಹಗಲೇ ಅಪ್ಪನೊಬ್ಬ ತನ್ನ ಮಗನಿಗೆ ನಡುರಸ್ತೆಯಲ್ಲಿ ಬೆಂಕಿ ಇಟ್ಟು ಕೊಂದ ಘಟನೆ ಅಜಾದ್ ನಗರದಲ್ಲಿ ಸಂಭವಿಸಿದೆ. ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್​ ಆಗಿದೆ.
ಅಪ್ಪನಿಂದಲೇ ಕೊಲೆಯಾದ ಮಗನ ಹೆಸರು ಅರ್ಪಿತ್​. ಆರೋಪಿ ಸುರೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಂದ್ರ ದೊಡ್ಡ ದೊಡ್ಡ ಬಿಲ್ಡಿಂಗ್ ಪ್ಯಾಬ್ರಿಕೇಷನ್ ಬಿಜಿನೆಸ್ ಮಾಡಿಕೊಂಡಿದ್ದ. ಈ ಜವಾಬ್ದಾರಿಯನ್ನು ಮಗನಿಗೆ ಸುರೇಂದ್ರ ನೀಡಿದ್ದ. ವ್ಯವಹಾರದಲ್ಲಿ ಸಾಕಷ್ಟು ಏರುಪೇರಾಗಿತ್ತು. ಹಣದ ಲೆಕ್ಕದಲ್ಲೂ ವ್ಯತ್ಯಾಸ ಕಂಡುಬಂದಿತ್ತು. ಇದೇ ವಿಚಾರಕ್ಕೆ ಬಿಜಿನೆಸ್ ಮೆಟೀರಿಯಲ್ ಇಟ್ಟಿದ್ದ ಗೋದಾಮಿನಲ್ಲಿ ಕೆಲಸಗಾರರ ಮುಂದೆಯೇ ಅಪ್ಪ-ಮಗನ ಮಧ್ಯೆ ಏ.1ರ ಮಧ್ಯಾಹ್ನ ಗಲಾಟೆ ನಡೆದಿತ್ತು. ಮಾತಿನ ಚಕಮಕಿ ವೇಳೆ ‘ಸಾಯಿಸ್ತೀಯಾ ಸಾಯಿಸು ನೋಡೋಣ… ಲೆಕ್ಕ ಕೊಟ್ರು ಸಾಯಿಸ್ತೀಯಾ.. ಲೆಕ್ಕ ನೀಡದಿದ್ರೂ ಸಾಯಿಸ್ತೀಯಾ… ನಾನು ಲೆಕ್ಕ ಕೊಡಲ್ಲ’ ಎಂದು ಅರ್ಪಿತ್ ಕೂಗಾಡಿದ್ದ. ಸಿಟ್ಟಾದ ಅಪ್ಪ, ಗೋದಾಮು ಬಳಿಯ ಮುಖ್ಯರಸ್ತೆಯಲ್ಲಿ ಮಗನಿಗೆ ಥಿನ್ನರ್ ಎರಚಿ ಬೆಂಕಿ ಇಟ್ಟಿದ್ದಾನೆ.
ಬೆಂಕಿಯಿಂದ ಸುಟ್ಟು ನರಳಾಡುತ್ತಿದ್ದ ಮಗನನ್ನು ಕೂಡಲೇ ಪರಿಚಯಸ್ಥರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಪೊಲೀಸರ ಮುಂದೆ ಅರ್ಪಿತ್ ಕೊಟ್ಟ ಹೇಳಿಕೆ ಹಾಗೂ ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಧಾರಿಸಿ ಚಾಮರಾಜಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅರ್ಪಿತ್​ ಇಂದು(ಗುರುವಾರ) ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ.
ಹುಬ್ಬಳ್ಳಿಯಲ್ಲಿ ಲವ್​ ಜಿಹಾದ್​ ಕೇಸ್​ಗೆ ಸ್ಫೋಟಕ ತಿರುವು: ಮುತಾಲಿಕ್​ ಕೊಟ್ಟ ಗಡುವಿನೊಳಗೇ ಠಾಣೆಗೆ ಬಂದ ಯುವತಿ

ಥೂ, ಇದೆಂಥಾ ಅಸಹ್ಯ? ಚೆನ್ನೈನಲ್ಲಿ ಮೂವರು ಬಾಲಕರ ಜತೆ ಗುಂಪು ಲೈಂಗಿಕ ಕ್ರಿಯೆ ನಡೆಸಿದ ಶಿಕ್ಷಕಿ!

ಕೆಲವೇ ದಿನದಲ್ಲಿ ಹಸಮಣೆ ಏರಬೇಕಿದ್ದ ಪೊಲೀಸ್​ ಪೇದೆ ದುರಂತ ಸಾವು! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + sixteen =
Remember me
