ಮೈಸೂರು:ಕಾಂಗ್ರೆಸ್​ಗೆ ನವ ಚೈತನ್ಯ ನೀಡುವ ಉದ್ದೇಶದಿಂದ ರಾಹುಲ್​ ಗಾಂಧಿ ಕೈಗೊಂಡಿರುವ ಭಾರತ್​ ಜೋಡೋ ಯಾತ್ರೆಗೆ ಕರ್ನಾಟಕದಲ್ಲಿ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಮಗನಿಗೆ ಸಾಥ್ ನೀಡಲು ಕಾಂಗ್ರೆಸ್​ನ ರಾಷ್ಟ್ರ ನಾಯಕಿ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಇಂದು ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದು, ನಾಳೆ ಮೈಸೂರಿನಿಂದ ಆರಂಭವಾಗುವ ಪಾದಯಾತ್ರೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿವೆ. ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದ್ದು, ಅ.6ರಂದು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಪ್ರಿಯಾಂಕ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ.
ವಿಶೇಷ ವಿಮಾನದ ಮೂಲಕ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ. ನಾಳೆ(ಸೋಮವಾರ)ಪಾದಯಾತ್ರೆ ಮುಗಿದ ಬಳಿಕ ಸೋನಿಯಾ ಕುಟುಂಬ ಕೊಡಗಿಗೆ ತೆರಳಲಿದೆ. ಭಾರತ್ ಜೋಡೋ ಪಾದಯಾತ್ರೆಗೆ ಅ.4 ಮತ್ತು‌ 5 ರಂದು ಬಿಡುವು ಇರುವ ಕಾರಣ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಕೊಡಗಿನ ಖಾಸಗಿ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾಳೆ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸುವ ಬಗ್ಗೆ ಇನ್ನೂ ಖಚಿತವಾಗಿಲ್ಲ, ಇಂದು ಸಂಜೆ ಸೋನಿಯಾ ಗಾಂಧಿ ಆಗಮನ ಖಚಿತವಾಗುತ್ತದೆ ಎಂದು ತಿಳಿಸಿದ್ದಾರೆ.
ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

ಹಸು ಮೇಯಿಸಿಕೊಂಡು ಮನೆಗೆ ತೆರಳುತ್ತಿದ್ದ ಚನ್ನಪಟ್ಟಣದ ರೈತ ದಂಪತಿ ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 8 =
Remember me
